Connect with us

Dvgsuddi Kannada | online news portal | Kannada news online

ಕಳೆದ 5 ವರ್ಷದಲ್ಲಿ ಕಾಂಗ್ರೆಸ್ ಪಕ್ಷ ಬಿಟ್ಟ ಶಾಸಕ ಸಂಖ್ಯೆ 170..!

ರಾಜಕೀಯ

ಕಳೆದ 5 ವರ್ಷದಲ್ಲಿ ಕಾಂಗ್ರೆಸ್ ಪಕ್ಷ ಬಿಟ್ಟ ಶಾಸಕ ಸಂಖ್ಯೆ 170..!

ನವದೆಹಲಿ: ಕಳೆದ 5 ವರ್ಷದಲ್ಲಿ ನಡೆದ ಚುನಾವಣೆಯಲ್ಲಿ 170 ಶಾಸಕರು ಕಾಂಗ್ರೆಸ್ ತೊರೆದು ಬೇರೆ ಪಕ್ಷ ಗಳನ್ನು ಸೇರಿಕೊಂಡಿದ್ದಾರೆ. ಇದೇ ಅವಧಿಯಲ್ಲಿ 18 ಬಿಜೆಪಿ ಶಾಸಕರು ಪಕ್ಷ ಬದಲಾಯಿಸಿ ಚುನಾವಣೆಗೆ ಸ್ಪರ್ಧಿಸಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ.

ಎಡಿಆರ್ ಹೊಸ ವರದಿಯಲ್ಲಿ 2016-2020ರ ಅವಧಿಯಲ್ಲಿ, ರಾಜಕೀಯ ಪಕ್ಷಗಳನ್ನು ಬದಲಾಯಿಸಿದ ಮಂದಿಯಲ್ಲಿ 405 ಮರು-ಸ್ಪರ್ಧಿಸಿದ ಶಾಸಕರ ಪೈಕಿ 182 ಮಂದಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರಂತೆ. 2019ರ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಬಿಜೆಪಿ ಸೇರಿದ್ದ ಏಳು ರಾಜ್ಯಸಭಾ ಸಂಸದರು.

2016-2020ರ ನಡುವೆ ಚುನಾವಣೆ ಎದುರಿಸಲು ಕಾಂಗ್ರೆಸ್ ತೊರೆದು ಬೇರೆ ಪಕ್ಷ ಸೇರಿದ್ದು,170 ಶಾಸಕರು ಬೇರೆ ಪಕ್ಷ ಸೇರಿದ್ದಾರೆ.  ಈ ಅವಧಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು 18 ಶಾಸಕರು ಮಾತ್ರ ಬಿಜೆಪಿ ಬಿಟ್ಟು ಬೇರೆ ಪಕ್ಷ ಸೇರಿದ್ದಾರೆ ಎಂದು ಹೇಳಲಾಗಿದೆ. ಮಧ್ಯಪ್ರದೇಶ, ಮಣಿಪುರ, ಗೋವಾ, ಅರುಣಾಚಲ ಪ್ರದೇಶ ಮತ್ತು ಕರ್ನಾಟಕ ರಾಜ್ಯ ವಿಧಾನಸಭೆಗಳಲ್ಲಿ ಇತ್ತೀಚೆಗೆ ಸರ್ಕಾರಗಳ ಪತನಕ್ಕೆ ಅವರ ಶಾಸಕರ ಪಕ್ಷಾಂತರ ಕಾರಣ ಎಂದು ವರದಿ ಹೇಳಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top