ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ (ಸ್ಪೆಷಲ್ ಇನ್ವೆಷ್ಟಿಗೇಶನ ಟೀಂ) ಮೊದಲ ದಿನವೇ ಐವರನ್ನು ವಶಕ್ಕೆ ಪಡೆದಿದೆ.
ಸಿಡಿ ಪ್ರಕರಣದ ತನಿಖೆ ಕೈಗೊಂಡ ಮೊದಲ ದಿನದಿಂದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ವಿಜಯನಗರ, ಚಾಮರಾಜಪೇಟೆಯಲ್ಲಿ ಐವರನ್ನು ವಶಕ್ಕೆ ಪಡೆದಿದೆ. ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದೆ.