ಬೆಂಗಳೂರು: ರಾಜ್ಯ ಸರ್ಕಾರ ಮಾರ್ಚ್ 23 ರೊಳಗೆ ಖಾಸಗಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಸದಿದ್ದರೆ ಶಾಲೆ ಬಂದ್ ಮಾಡುವುದಾಗಿ ಸರ್ಕರಕ್ಕೆ ರುಪ್ಸಾ ಎಚ್ಚರಿಕೆ ನೀಡಿದೆ.
ಕರ್ನಾಟಕ ಖಾಸಗಿ ಶಾಲೆಗಳ ಒಕ್ಕೂಟ ರಾಜ್ಯ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ರಾಜ್ಯ ಸರ್ಕಾರ ಖಾಸಗಿ ಶಾಲೆಗಳ ಬೇಡಿಕೆಗಳನ್ನು ಈಡೇರಿಸದೇ ಇರುವುದರಿಂದ ಮತ್ತೆ ರಸ್ತೆರಗೆ ಇಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದರು.
ಸರ್ಕಾರದ ಆದೇಶದಂತೆ ಶೇ. 70 ರಷ್ಟು ಟ್ಯುಷನ್ ಫೀಸ್ ಕೂಡ ಪೋಷಕರು ಕಟ್ಟುತ್ತಿಲ್ಲ. ಇದರಿಂದ ಶಾಲೆ ನಡೆಸುವುದು ಕಷ್ಟವಾಗಿದೆ. ಹೀಗಾಗಿ ಮಾರ್ಚ್ 23 ರವರೆಗೆ ಬೇಡಿಕೆ ಈಡೇರಿಸಲು ಡೈಡ್ ಲೈನ್ ನೀಡಲಾಗಿದೆ. ರಾಜ್ಯ ಸರ್ಕಾರ ಬೇಡಿಕೆ ಈಡೇರಿಕೆಗೆ ಸ್ಪಂದಿಸದಿದ್ದರೆ ಮಾರ್ಚ್ 23ರ ಬಳಿಕ ಶಾಲೆ ತೆರೆಯಬೇಕೋ, ಬಂದ್ ಮಾಡಬೇಕೋ ಎಂದು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.



