ಬೆಂಗಳೂರು: ಕೊರೋನಾದಿಂದ ರಾಜ್ಯದಲ್ಲಿ 1-5ನೇ ತರಗತಿ ಇನ್ನೂ ಆರಂಭಗೊಂಡಿಲ್ಲ. ಕೆಲವು ಖಾಸಗಿ ಶಾಲೆಗಳು 1-5ನೇ ತರಗತಿಗಳನ್ನು ಆರಂಭಿಸಿರುವುದು ಗಮನಕ್ಕೆ ಬಂದಿದೆ. ಇಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಅವರು ಆದೇಶವನ್ನು ಹೊರಡಿಸಿದ್ದು, ಅದರಲ್ಲಿ ಅವರು ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದೊಂದಿಗೆ ಶಿಕ್ಷಣ ಇಲಾಖೆ 6 ನೇ ತರಗತಿಯಿಂದ ಮೇಲ್ಪಟ್ಟ ತರಗತಿಯನ್ನು ನಡೆಸಲು ಅನುಮತಿಯನ್ನು ನೀಡಿರುತ್ತದೆ. ಆದರೆ ರಾಜ್ಯದ ಹಲವೆಡೆ ಕೆಲವು ಖಾಸಗಿ ಶಾಲೆಗಳು 1 ರಿಂದ 5 ನೇ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಪ್ರಕರಣಗಳು ಮಾಧ್ಯಮದಲ್ಲಿ ವರದಿಯಾಗಿದ್ದು, ಸರ್ಕಾರದ ಅನುಮತಿಯಿಲ್ಲದೇ ಈ ರೀತಿ ಕ್ರಮವನ್ನು ಅನುಸರಿಸುರುವುದು ನಿಯಬಾಹಿರವಾಗಿದೆ.
ತಾಲೂಕು ಮಟ್ಟದಲ್ಲಿ ಪರಿಶೀಳನ ತಂಡಗಳನ್ನು ರಚಿಸಿ, ಈ ರೀತಿ ಅನಧಿಖೃತವಾಗಿ ಶಾಲೆಯನ್ನು ನಡೆಸುತ್ತಿರುವವರ ವಿರುದ್ದ, ಕಾನೂನು ಕ್ರಮವನ್ನು ಜರುಗಿಸಲು ಮುಂದಾಗಲೂ ಕೂಡಲೇ ಅಧಿಕೃತ ಆದೇಶವನ್ನು ಅವರು ಹೊರಡಿಸಿದ್ದಾರೆ.