ಮುಂಬೈ: ಬೆಳಗಾವಿ ಮರಾಠಿ ಭಾಷಿಕರ ಮೇಲೆ ಕನ್ನಡಿಗರ ದೌರ್ಜನ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಶಿವಸೇನಾ ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿದೆ.
ಬೆಳಗಾವಿಯಲ್ಲಿ ಮರಾಠಿ ಮಾತನಾಡುವವರ ಮೇಲೆ ಕನ್ನಡಪರ ಸಂಘಟನೆಗಳು ಹಲ್ಲೆ ಮಾಡಿದ್ದಾರೆ. ಮರಾಠಿ ಫಲಕಗಳನ್ನು ಕಿತ್ತೆಸೆದಿದ್ದಾರೆ. ಇದು ಮರಾಠಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಸಂಪಾದಕೀಯದಲ್ಲಿ ಟೀಕಿಸಿದ್ಧಾರೆ.
ಕರ್ನಾಟಕ ಪೊಲೀಸರು, ಸ್ಥಳೀಯರು, ಆಡಳಿತಾರೂಢ ಬಿಜೆಪಿ ಸರ್ಕಾರ ಇಂಥ ದುಷ್ಕೃತ್ಯಗಳನ್ನು ಬೆಂಬಲಿಸುತ್ತಿದೆ. ಮಹಾರಾಷ್ಟ್ರದಲ್ಲಿ ಪರಭಾಷಿಕರೊಂದಿಗೆ ಮರಾಠಿಗರು ಎಂದಿಗೂ ಕೆಟ್ಟದಾಗಿ ನಡೆದುಕೊಂಡಿಲ್ಲ. ಇಂದೋರ್, ವಡೋದರಾ ನಗರಗಳಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಮರಾಠಿಗರು ಇದ್ದಾರೆ. ಆದರೆ, ಅವರು ಎಂದಿಗೂ ಸ್ಥಳೀಯರೊಂದಿಗೆ ಸಂಘರ್ಷ ಎದುರಿಸಿಲ್ಲ ಎಂದಿದ್ದಾರೆ.ಈ ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್, ಕರ್ನಾಟಕದ ಮುಖ್ಯಮಂತ್ರಿ, ಕೇಂದ್ರದ ಸಚಿವರೊಂದಿಗೆ ಚರ್ಚಿಸಬೇಕು ಎಂದಿದ್ದಾರೆ.