ಬೆಂಗಳೂರು: ಇಂಡಿಯನ್ ಪೋಸ್ಟಲ್ ಇಲಾಖೆಯಲ್ಲಿ ಖಾಲಿ ಇರುವ 1,137 ಬಿಪಿಎಂ, ಎಬಿಪಿಎಂ ಮತ್ತು ದಖ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಹತೆ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮಾರ್ಚ್ 8,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ: ಬಿಪಿಎಂ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,000 ರೂ ವೇತನ ಸಿಗಲಿದೆ. ಎಬಿಪಿಎಂ/ದಖ್ ಸೇವಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000 ರೂ ವೇತನ ನೀಡಲಾಗುವುದು. ಆಸಕ್ತ ಅಭ್ಯರ್ಥಿಯನ್ನ ಲಿಖಿತ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:ಓಸಿ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ವರ್ಗ/ಮಹಿಳೆ ಅಭ್ಯರ್ಥಿಗಳು 100ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಆದರೆ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ಗೆ http://www.appost.in/gdsonline/home.aspx ಭೇಟಿ ನೀಡಿ. ಅರ್ಜಿ ಸಲ್ಲಿಸಲು ಏಪ್ರಿಲ್ 7 ಕೊನೆಯ ದಿನವಾಗಿದೆ.



