Connect with us

Dvgsuddi Kannada | online news portal | Kannada news online

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಕರ್ತವ್ಯದ ಅವಧಿಯಲ್ಲಿ ಐಡಿ ಕಾರ್ಡ್ ಧರಿಸುವುದು ಕಡ್ಡಾಯ; ಸರ್ಕಾರದ ಆದೇಶ

ಪ್ರಮುಖ ಸುದ್ದಿ

ಇನ್ಮುಂದೆ ಸರ್ಕಾರಿ ಅಧಿಕಾರಿಗಳು ಕರ್ತವ್ಯದ ಅವಧಿಯಲ್ಲಿ ಐಡಿ ಕಾರ್ಡ್ ಧರಿಸುವುದು ಕಡ್ಡಾಯ; ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಆಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಸರ್ಕಾರ ಖಡಕ್ ಆದೇಶ ಹೊರಡಿಸಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳ ಅಧಿಕಾರಿ, ನೌಕರರು ಗುರುತಿನ ಚೀಟಿ ಧರಿಸದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಆದ್ದರಿಂದ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಮಾ.16 ರಂದು ಹೊರಡಿಸಿದ ಆದೇಶದಲ್ಲಿ ಉಲ್ಲೇಖಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಅವರು ಸರ್ಕಾದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿಗಳು, ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ.  ದಿನಾಂಕ 03-11-2020ರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ  ಸರ್ಕಾರ ಆದೇಶ ಹೊರಡಿಸಿತ್ತು. ಮುಂದುವರೆದು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇರುವ ತಪಾಸಣೆ ತಂಡದ ಮೂಲಕ ಗುರುತಿನ ಚೀಟಿ ಧರಿಸದಿರುವವರನ್ನು ಪತ್ತೆ ಹಚ್ಚಿ, ಬಿಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top