ತುಮಕೂರು: ರಾಜ್ಯದಲ್ಲಿ ಮತ್ತೆ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಶಾಲಾ-ಕಾಲೇಜು ಬಂದ್ ಮಾಡುವ ಯೋಚನೆ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾ-ಕಾಲೇಜು ಬಂದ್ ಮಾಡುವ ಯೋಚನೆ ಇಲ್ಲ. ಒಂದು ವಾರದಲ್ಲಿ ಸುಧಾರಿಸದೇ ಇದ್ದರೆ ಅಥವಾ ಕೋವಿಡ್ ಸಂಖ್ಯೆ ಜಾಸ್ತಿ ಆಗ್ತಿದ್ರೆ ಪರಿಸ್ಥಿತಿ ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ಇನ್ನು ಕೊರೊನಾ ಟಫ್ ರೂಲ್ಸ್ ಹಾಗೂ ಜನ ಸಂಖ್ಯೆ ಮಿತಿ ಉಪಚುನಾವಣೆಗೆ ಅನ್ವಯ ಆಗಲ್ಲ. ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಕಾರ್ಯಕ್ರಮಕ್ಕೆ ಮಿತಿ ಷರತ್ತು ಹಾಕಿದ್ದೇವೆ. ಸಾರ್ವಜನಿಕ ಸಭೆಗಳಿಗೆ ಯಾವುದೇ ನಿರ್ಬಂಧ ಹಾಕಿಲ್ಲ ಎಂದರು.



