ದಾವಣಗೆರೆ: ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ದಾವಣಗೆರೆ ವಿಶ್ವವಿದ್ಯಾನಿಲಯ ಆಡಳಿತ ನಿರ್ವಹಣಾ ಶಾಸ್ತ್ರ ಅಧ್ಯಯನ ಸಂಸ್ಥೆ ವತಿಯಿಂದ ಮಾರ್ಚ್ 26 ಮತ್ತು 27 ರಂದು ರಿಲಯನ್ಸ್ ರಿಟೇಲ್ ಸಂಸ್ಥೆಯು ಕ್ಯಾಂಪಸ್ ಆಯ್ಕೆ ನಡೆಸಲಿದೆ.
ರಿಲಯನ್ಸ್ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ 500ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡಿದ ಮತ್ತು ಅಧ್ಯಯನ ಮಾಡುತ್ತಿರುವ ಎಂಬಿಎ ವಿದ್ಯಾರ್ಥಿಗಳು ಪ್ರಸ್ತುತ ಕ್ಯಾಂಪಸ್ ಆಯ್ಕೆ ಪ್ರಕ್ರಿಯಲ್ಲಿ ಪಾಲ್ಗೊಳ್ಳಬಹುದು. ಗೂಗಲ್ ಫಾರ್ಮ್ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು.
ಆಸಕ್ತ ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆ ನಿಗದಿತ ದಿನದಂದು ಬೆಳಿಗ್ಗೆ 9 ಕ್ಕೆ ಹಾಜರಿರಬೇಕು ಎಂದು ವಿಭಾಗದ ಅಧ್ಯಕ್ಷ ಡಾ.ಆರ್.ಶಶಿಧರ್ ಮತ್ತು ನೇಮಕಾತಿ ಅಧಿಕಾರಿ ಡಾ.ಸಂತೋಷ ಎಂ.ಬೊಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.