ದಾವಣಗೆರೆ: ಯುವ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಮುಜಾಹಿದ್ ಪಾಷಾ ಅವರನ್ನು ಪಕ್ಷದಿಂದ 6 ವರ್ಷ ಉಚ್ಚಾಟನೆ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿ ತಿಳಿಸಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆ ವಾರ್ಡ್ ನಂ.22 ರ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಘೋಷಿಸಿದ್ದರೂ, ಪಕ್ಷದ ನಿಲುವಿಗೆ ವಿರುದ್ಧವಾಗಿ ಪಕ್ಷೇತರಾಗಿ ಸ್ಪರ್ಧಿಸಿದ್ದಾರೆ. ಇದರಿಂದ ವಾರ್ಡ್ ನಂಬರ್ 22ರಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ರವಿಸ್ವಾಮಿ ಅವರನ್ನುಸೋಲಿಸುವ ಹುನ್ನಾರ ನಡೆಸಿದ್ದಾರೆ.
ಪಕ್ಷದ ಹಿರಿಯರಾದ ಶಾಮನೂರು ಶಿವಶಂಕರಪ್ಪ, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಜಿಲ್ಲಾ ಅಧ್ಯಕ್ಷ ಎಚ್.ಬಿ. ಮಂಜಪ್ಪ ಅವರು, ರವಿಸ್ವಾಮಿ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ಆದರೆ, ಮಹಮ್ಮದ್ ಮುಜಾಹಿದ್ ಪಾಷಾ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಮತಗಳ ವಿಭಜನೆ ಮಾಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಕ್ಷದ ಅಧ್ಯಕ್ಷರ ತೀರ್ಮಾನದಂತೆ ಮಹಮ್ಮದ್ ಮುಜಾಹಿದ್ ಪಾಷಾ ಇವರನ್ನು ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಹುದ್ದೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.



