Connect with us

Dvgsuddi Kannada | online news portal | Kannada news online

ಸಿಡಿ ಪ್ರಕರಣ: ಯುವತಿಗೆ ಪ್ರಾಣಕ್ಕೇನಾದ್ರೂ ಅಪಾಯ ಎದುರಾದರೆ, ಸರ್ಕಾರವೇ ಹೊಣೆ

ಪ್ರಮುಖ ಸುದ್ದಿ

ಸಿಡಿ ಪ್ರಕರಣ: ಯುವತಿಗೆ ಪ್ರಾಣಕ್ಕೇನಾದ್ರೂ ಅಪಾಯ ಎದುರಾದರೆ, ಸರ್ಕಾರವೇ ಹೊಣೆ

ಬೆಂಗಳೂರು:  ಸಿಡಿ ಪ್ರಕರಣದಲ್ಲಿ ಯುವತಿ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ, ಗೃಹಸಚಿವರು ಹಾಗೂ ಸರ್ಕಾರವೇ ಹೊಣೆಯಾಗುತ್ತದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕುರಿತು ಟ್ವಿಟ್ ಮಾಡಿದ ಅವರು, ಯುವತಿ ಬರೆದ ಪತ್ರದಲ್ಲಿ ಎಸ್.ಐ.ಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿದ್ದಾಳೆ. ಅವರು ಸಾಕ್ಷ್ಯನಾಶ ಮಾಡುತ್ತಿದ್ದು, ತನ್ನ ವಿರೋಧಿಗಳ ಜೊತೆ ಶಾಮೀಲಾಗಿದ್ದಾರೆ  ಎಂದು ಆರೋಪಿಸಿರುವುದು ಗಂಭೀರವಾದ ವಿಷಯ ಎಂದಿದ್ದಾರೆ. ತನಗೆ ಪ್ರಾಣ ಭಯ ಇದೆ ಎಂದು ಆಕೆ ಬರೆದಿರುವುದು ಆತಂಕದ ವಿಚಾರ, ಯಡಿಯೂರಪ್ಪ ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿ ಇದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂತ್ರಸ್ಥ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದಾರೆ.  ರಾಜ್ಯದ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ.  ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರ ವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ, ಪೊಲೀಸರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು? ಎಂದು ಅನುಮಾನ ವ್ಯಕ್ತ ಪಡಿಸಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ? ಎಂದು ಕುಟುಕಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top