ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆಯಿಂದ ಒಂದರಿಂದ ಒಂಬತ್ತನೆ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದು ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಅಧಿಕಾರಿಗಳು ಹಾಗೂ ಹಿರಿಯ ಸಚಿವರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಜೆ ಹಿನ್ನೆಲೆ ಮಕ್ಕಳು ಕುಣಿದು ಕುಪ್ಪಳಿಸುತ್ತಾರೆ. ಶಾಲೆಗಳಲ್ಲಾದರೆ ಶಿಸ್ತಿನಿಂದ ಇರುತ್ತಾರೆ. ರಾಜ್ಯದ ಅಪಾರ್ಟ್ ಮೆಂಟ್ ಗಳಲ್ಲಿನ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ. ಅಪಾರ್ಟ್ ಮೆಂಟ್ ಗಳಿಗೆ ಹೋಲಿಸಿದರೆ ಸ್ಲಂಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಸೋಂಕು ಪ್ರಮಾಣ ಕಡಿಮೆ ಆಗಿದೆ ಎಂದು ಅವರು ಹೇಳಿದರು.
ಮಕ್ಕಳು ಮನೆಯಲ್ಲಿ ಇರುವುದಕ್ಕಿಂತ ಶಾಲೆಗೆ ಹೋಗುವುದು ಉತ್ತಮ. ಆದ್ದರಿಂದ ಇನ್ನೂ 15 ದಿನಗಳಲ್ಲಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಿದರು.