ಬೆಳಗಾವಿ: ಗಡಿನಾಡು ಬೆಳಗಾವಿಯನ್ನು 2ನೇ ರಾಜಧಾನಿ ಮಾಡುವ ಉದ್ದೇಶದಿಂದಲೇ ಸುವರ್ಣ ವಿಧಾನಸೌಧ ಕಟ್ಟಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಂತರ ಪ್ರಾಮುಖ್ಯತೆ ಪಡೆದ ಬೆಳಗಾವಿಯನ್ನು 2ನೇ ರಾಜಧಾನಿಯಾಗಿ ಅಭಿವೃದ್ಧಿ ಪಡಿಸಲಾಗುವುದು. ಮತ ಬ್ಯಾಂಕ್ ರಾಜಕಾರಣ ಮಾಡಿದ ಕಾಂಗ್ರೆಸ್, ಅವಸಾನದ ಅಂಚಿನಲ್ಲಿದೆ ಎಂದರು.
ಕಾಂಗ್ರೆಸ್ ಸರ್ಕಾರವಿದ್ದಾಗ ಇಲ್ಲಿಗೆ ಏನನ್ನೂ ಕೊಡುಗೆ ನೀಡಲಿಲ್ಲ. ನಮ್ಮ ಸರ್ಕರವೇ ಸುವರ್ಣ ಸೌಧ ನಿರ್ಮಾಣ ಮಾಡಿದೆ. ಸಿದ್ದರಾಮಯ್ಯ ಸುಮ್ಮನೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದು, ಬೆಳಗಾವಿಗೆ ಏನು ಕೊಡುಗೆ ಕೊಟ್ಟಿದ್ದರೆ ಎಂಬುದನ್ನು ತಿಳಿಸಲಿ ಎಂದು ಸವಾಲು ಹಾಕಿದರು. ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಲು ಸ್ವಲ್ಪ ಸಮಯ ಕೊಡಿ. ಆ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ ಎಂದರು.



