ಮುಂಬೈ: ಚಿನ್ನದ ಬೆಲೆ ಮತ್ತೆ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 45,830 ರೂ. ಇದ್ದುದು ಇಂದು 45,100 ರೂ. ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 42,010 ರೂ. ಇದ್ದುದು ಇಂದು 41,340 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಕೂಡ ಇಳಿಕೆಯಾಗಿದ್ದು, 65,700 ರೂ. ಇದ್ದ ಬೆಳ್ಳಿ ಬೆಲೆ ಇಂದು 63,100ಕ್ಕೆ ಇಳೆಕೆಯಾಗಿದೆ.
ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 48,000 ರೂ. ಇದೆ. ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 69,000 ರೂ.ಇದೆ.



