ದಾವಣಗೆರೆ: ಬಿಜೆಪಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲುವು ದಾಖಲಿಸಿದೆ. ಯಾವುದೇ ಪ್ರಕರಣ ಉಪ ಚುನಾವಣೆ ಮೇಲೆ ಪ್ರಭಾವ ಬೀರಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದರು.
ನಗರದಲ್ಲಿ ಪಿಬಿ ರಸ್ತೆಯಲ್ಲಿ ನೂತನ ಕಿಯ ಶೋರೂಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ದಾಖಲಿಸಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್, ಶಿವಮೊಗ್ಗ ಸಂಸದ ರಾಘವೇಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್, ದಾವಣಗೆರೆ ಮೇಯರ್ ಎಸ್. ಟಿ. ವೀರೇಶ್ ಮತ್ತು ಪಕ್ಷದ ಮುಖಂಡರುಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.



