ಬೆಂಗಳೂರು: ಬಿಜೆಪಿ ಹಿರಿಯರು ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಹಾಗೂ ಹೈಕಮಾಂಡ್ ಗೆ ದೂರು ನೀಡಿದ್ದು ಸರಿಯಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ
ಮುಖ್ಯಮಂತ್ರಿ ಭೇಟಿ ಬಳಿಕ ಮಾತನಾಡಿ, ಈಶ್ವರಪ್ಪ ಅವರಿಗೆ ಯಾವುದೇ ಅಸಮಾಧಾನ ಇದ್ದರೆ, ಅದನ್ನು ಸರ್ಕಾರ ಮಟ್ಟದಲ್ಲಿ ಬಗೆಹರಿಸಿಕೊಳ್ಳಬಹದುದಿತ್ತು. ಆದರ, ರಾಜ್ಯಪಾಲರ ಅಂಗಳಕ್ಕೆ ತೆಗೆದುಕೊಂಡು ಹೋಗಿದ್ದು ಸರಿಯಲ್ಲ. ನಮ್ಮದು ಶಿಸ್ತಿನ ಪಕ್ಷ, ಶಿಸ್ತಿನ ಉಲ್ಲಂಘನೆಯಾಗಬಾರದು. ಮುಖ್ಯಮಂತ್ರಿ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದೆ ಎಂದರು.
ಸಿಎಂ ಅವರ ಮಾರ್ಗದರ್ಶನದಲ್ಲಿಯೇ ಕೆಲಸ ಮಾಡುತ್ತಿದ್ದೇವೆ. ಈಶ್ವರಪ್ಪ ಅವರಿಗೆ ಯಾವುದೇ ಸಮಸ್ಯೆ, ಸಂದೇಹಗಳಿದ್ದರೆ ಸಚಿವ ಸಂಪುಟದಲ್ಲಿ ಚರ್ಚಿಸಬಹುದಿತ್ತು. ಅನುದಾನ ಬಿಡುಗಡೆ ಆಗಿಲ್ಲ ಎಂದು ಶಾಸಕರು ದೂರುಗಳು ಬಂದ ಕಾರಣ, ಅನುದಾವನ್ನು ಬೇಗ ಮುಟ್ಟಿಸಲು ಮುಖ್ಯಮಂತ್ರಿಯವರ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು.



