ದಾವಣಗೆರೆ: ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ತಣಿಗೆರೆ, ಹೆಬ್ಬಳಗೆರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಕೆಲಸಕ್ಕೆ ಮಾಸಿಕ ರೂ.6,000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವಯೋಮಾನದೊಳಗಿನ ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾದ ಆಸಕ್ತ ವಿಕಲಚೇತನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಏ.09 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಆಯಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೆÉೀರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್ ದಾವಣಗೆರೆ ದೂರವಾಣಿ: 08192-263939 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಜಿ.ಎಸ್ ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.