Connect with us

Dvgsuddi Kannada | online news portal | Kannada news online

ನಾಳೆ ಕೆಎಸ್ ಆರ್ ಟಿಸಿ ನೌಕರ ಮುಷ್ಕರ: ಖಾಸಗಿ ಬಸ್ ಗಳು ಹೆಚ್ಚಿನ ದರ ವಸೂಲಿಗಿಳಿದ್ರೆ ಕಾನೂನು ಕ್ರಮ ಎಚ್ಚರಿಕೆ

ಪ್ರಮುಖ ಸುದ್ದಿ

ನಾಳೆ ಕೆಎಸ್ ಆರ್ ಟಿಸಿ ನೌಕರ ಮುಷ್ಕರ: ಖಾಸಗಿ ಬಸ್ ಗಳು ಹೆಚ್ಚಿನ ದರ ವಸೂಲಿಗಿಳಿದ್ರೆ ಕಾನೂನು ಕ್ರಮ ಎಚ್ಚರಿಕೆ

ಬೆಂಗಳೂರು: ನಾಳೆ ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನಗಳು ಎಲ್ಲಾ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಿದ್ದೇವೆ. ಒಂದು ವೇಳೆ ಯಾರಾದರೂ ಪರಿಸ್ಥಿತಿಯ ಲಾಭ ಪಡೆದು ಹೆಚ್ಚಿನ ದರ ವಸೂಲಿ ಮಾಡಲು ಮುಂದಾದ್ರೆ,  ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಕೆಎಸ್‍ಆರ್‍ಟಿಸಿ ಆಯುಕ್ತ ಶಿವಯೋಗಿ ಕಳಸಾದ್ ಎಚ್ಚರಿಸಿದ್ರು.

ಸುದ್ದಿಗಾರರೊಂದಿಗೆ ಮಾತನಾಡಿ, ಒಂದು ವೇಳೆ ನಾಳೆ ಸಾರಿಗೆ ನೌಕರರು ಮುಷ್ಕರ ಭಾಗವಹಿಸಿದ್ರೆ,  ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಪರ್ಯಾಯ ಕ್ರಮ ಕೈಗೊಂಡಿದ್ದೇವೆ. ಟ್ಯಾಕ್ಸಿ, ಕ್ಯಾಬ್, ಸ್ಕೂಲ್ ವಾಹನಗಳು ಸೇರಿದಂತೆ ಖಾಸಗಿ ವಾಹನಗಳು ಪರ್ಯಾಯವಾಗಿ ಸಂಚರಿಸಲಿದ್ದು, ಯಾರು ಬೇಕಾದರೂ ಸಂಚರಿಸಬಹುದು. ಆದರೆ ಹೆಚ್ಚಿನ ದರವನ್ನು ತೆಗೆದುಕೊಳ್ಳುವಂತಿಲ್ಲ ಎಂದು ಸೂಚನೆ ಕೊಡಲಾಗಿದೆ.

ಸರ್ಕಾರ ನಿಗದಿಪಡಿಸಿರುವ ದರವನ್ನೇ ಪ್ರಯಾಣಿಕರಿಂದ ಪಡೆಯಬೇಕು. ಅಪ್ಪಿತಪ್ಪಿಯೂ ಹೆಚ್ಚಿನ ದರ ಪಡೆದಿರುವುದು ನಮ್ಮ ಗಮನಕ್ಕೆ ಬಂದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ. ಅದಕ್ಕೆ ಯಾರೂ ಅವಕಾಶ ಕೊಡಬಾರದು ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top