ಬೆಂಗಳೂರು: ನಾಳೆ ಕೆಎಸ್ ಆರ್ ಟಿಸಿ ನೌಕರರು 6ನೇ ವೇತನ ಆಯೋಗದ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದು,ಈ ಮುಷ್ಕರದಲ್ಲಿ ಬಿಎಂಟಿಸಿ ನೌಕರರು ಭಾಗಿಯಾದ್ರೆ ವೇತನ ಕಟ್ ಮಾಡುವುದಾಗಿ ಬಿಎಂಟಿಸಿ ಎಂಡಿ ಶಿಖಾ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಜೊತೆ 6ನೇ ವೇತನ ಆಯೋಗಕೆ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ. ಆದರೆ, ನಿಗಮವು ಜನಸಾಮಾನ್ಯರಿಗೆ ಸಮರ್ಪಕವಾದ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದು, ಇದಕ್ಕೆ ತೊಂದರೆ ಆದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.