ಹುಮ್ನಾಬಾದ್: ಸಾರಿಗೆ ನೌಕರರು ಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಇದರಿಂದ ನಾಳೆ ನಿಮಗೆ ತೊಂದರೆಯಾಗುತ್ತದೆ. ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿದ್ದು, ವೇತನ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು ಸಹ ಕೇಳಿಕೊಂಡಿದ್ದೇವೆ, ಸದ್ಯದಲ್ಲಿಯೇ ವೇತನ ಹೆಚ್ಚಿಸಲಾಗುವುದು ಎಂದರು.
ನಿಮ್ಮ ಮುಷ್ಕರ ನಡೆಸಿದರೆ ಇಲಾಖೆಗೆ ನಷ್ಟವಾಗಿ ವೇತನ ನೀಡಲು ಮತ್ತಷ್ಟು ಕಷ್ಟವಾಗುತ್ತದೆ. ಹೀಗಾಗಿ ಕೆಲಸಕ್ಕೆ ಹಾಜರಾಗಿ ಎಂದು ಮನವಿ ಮಾಡಿಕೊಂಡರು.
ಸಾರಿಗೆ ಇಲಾಖೆ ನೌಕರರನ್ನು ಮುಷ್ಕರ ಮಾಡಿಸಲೇಬೇಕೆಂದು ಮಾಡಿಸುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂದು ಮುಂದೆ ಗೊತ್ತಾಗುತ್ತದೆ. ಯಾರದ್ದೋ ಮಾತು ಕೇಳಬೇಡಿ, ಮುಷ್ಕರ ನಿಲ್ಲಿಸಿ ನಾಳೆಯಿಂದಲೇ ಕರ್ತವ್ಯಕ್ಕೆ ಹಾಜರಾಗಿ ಎಂದರು.
ಸಾರಿಗೆ ಇಲಾಖೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆಯಾಗಬಾರದೆಂದು ಖಾಸಗಿ ಬಸ್ಸು ನಿರ್ವಾಹಕರಲ್ಲಿ ಓಡಾಡಕ್ಕೆ ಕೇಳಿಕೊಂಡಿದ್ದು, ಖಾಸಗಿ ಬಸ್ಸುಗಳನ್ನು ನಿಲ್ಲಿಸಲು ಜಾಗವನ್ನು ನೀಡಿ ವ್ಯವಸ್ಥೆ ಮಾಡಿದ್ದೇವೆ. ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ. ಸರ್ಕಾರ ಸಾರಿಗೆ ನೌಕರರ ಆಶೋತ್ತರಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ. ಸರ್ಕಾರ ಎಂದೆಂದಿಗೂ ತಮ್ಮ ಜೊತೆಗಿದ್ದು, ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸುತ್ತಿದ್ದೇನೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ರಾಜ್ಯ ಬಿಜೆಪಿ ಸರ್ಕಾರ ಈಡೇರಿಸಿದೆ.ಸರ್ಕಾರವು ಸಾರಿಗೆ ನೌಕರರ ಆಶೋತ್ತರಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿಯಾಗಿದೆ
ಸರ್ಕಾರ ಎಂದೆಂದಿಗೂ ತಮ್ಮ ಜೊತೆಗಿದ್ದು,ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ಹಿಂತೆಗೆದುಕೊಳ್ಳುವಂತೆ ವಿನಂತಿಸುತ್ತಿದ್ದೇನೆ pic.twitter.com/I0VhDnmpFq— Laxman Savadi (@LaxmanSavadi) April 6, 2021



