ದಾವಣಗೆರೆ: ಜಿಲ್ಲೆಯಲ್ಲಿ ಇಂದು 20 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 10 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 22,771ಕ್ಕೆ ಏರಿಕೆಯಾಗಿದ್ದು, 22, 327 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನು 180 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 264 ಮಂದಿ ಮೃತಪಟ್ಟಿದ್ದಾರೆ.