Connect with us

Dvgsuddi Kannada | online news portal | Kannada news online

ಸಂಕಷ್ಟದ ಸಂದರ್ಭದಲ್ಲಿ ಹಠಕ್ಕೆ ಬಿದ್ದು ಮುಷ್ಕರ ನಡೆಸುವುದು ಸರಿಯಲ್ಲ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಸಂಕಷ್ಟದ ಸಂದರ್ಭದಲ್ಲಿ ಹಠಕ್ಕೆ ಬಿದ್ದು ಮುಷ್ಕರ ನಡೆಸುವುದು ಸರಿಯಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಇದರಲ್ಲಿ ಏನಾದರೂ ಸಮಸ್ಯೆ ಇದ್ದರೆ ಪರಿಹಾರ ಕಂಡುಕೊಳ್ಳೋಣ. ಆದರೆ,  ಸಂಕಷ್ಟದ ಸಂದರ್ಭದಲ್ಲಿ ಹಠಕ್ಕೆ ಬಿದ್ದು ಮುಷ್ಕರ ನಡೆಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ 8 ಬೇಡಿಕೆಗಳಲ್ಲಿ ಏನಾದರೂ ಸಮಸ್ಯೆ ಇದ್ದರೆ,  ಅದನ್ನು ಸರಿಪಡಿಸುತ್ತೇವೆ. ಆದರೆ, 6ನೇ ವೇತನ ಆಯೋಗ ಜಾರಿ ಮಾತ್ರ ಸಾಧ್ಯವೇ ಇಲ್ಲ. ಸಾರಿಗೆ ಇಲಾಖೆ ಇರುವುದು ಸಾರ್ವಜನಿಕರ ಸೇವೆಗೆ,  ಬಸ್ ಸಂಚಾರವಿಲ್ಲದೇ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದರು.

ಸರ್ಕಾರದ ಹಣಕಾಸಿನ ಸಂಕಷ್ಟ ಅರ್ಥಮಾಡಿಕೊಂಡು ಕರ್ತವ್ಯಕ್ಕೆ ಹಾಜರಾಗಬೇಕು. ಇಂದಿನ ಪರಿಸ್ಥಿತಿಯಲ್ಲಿ 6ನೇ ವೇತನ ಆಯೋಗ ಜಾರಿ ಮಾಡಲು ಸಾಧ್ಯವೇ ಇಲ್ಲ. ಹಠವನ್ನು ನಿಲ್ಲಿಸಿ ಕೆಲಸಕ್ಕೆ ಹಾಜರಾಗಿ. ಯಾರದೋ ಮಾತು ಕೇಳಿ ಈ ರೀತಿ ಮುಷ್ಕರ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top