ದಾವಣಗೆರೆ: ಸಂಸದ ಜಿ.ಎಂ ಸಿದ್ದೇಶ್ವರ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬದ ಸದಸ್ಯರು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಭೇಟಿ ನೀಡಿ ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದರು. ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಸಂಸದರ ಧರ್ಮಪತ್ನಿ ಗಾಯತ್ರಿ ಸಿದ್ದೇಶ್ವರ, ಪುತ್ರ ಜಿ.ಎಲ್.ರಾಜೀವ್, ಜಿ.ಪಿ.ಮಲ್ಲಿಕಾರ್ಜುನ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತ ರಾವ್ ಜಾಧವ್, ಧೂಡ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.




