ದಾವಣಗೆರೆ: ಜಿಲ್ಲೆಯಲ್ಲಿ ಇಂದು 40 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಯಾವುದೇ ಸಾವು ಸಂಭವಿಸಿಲ್ಲ.
ಇದುವರೆಗೆ 22, 927 ಜನರಿಗೆ ಸೋಂಕು ತಗುಲಿದಂತಾಗಿದ್ದು, 22,432 ಸೋಂಕಿತರು ಗುಣಮುಖ ಕಂಡಂತಾಗಿದೆ. 264 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಸಕ್ರಿಯ 271 ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ. ದಾವಣಗೆರೆ 29, ಹರಿಹರ00, ಜಗಳೂರು 01, ಚನ್ನಗಿರಿ 04, ಹೊನ್ನಾಳಿ 03ಮತ್ತು ಹೊರ ಜಿಲ್ಲೆಯ ಮೂವರಿಗೆ ಸೋಂಕು ದೃಢಪಟ್ಟಿದೆ.



