ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಬಿಟ್ಟು ಇನ್ನುಳಿದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ. ಒಂದು ವೇಳ ಅಗತ್ಯ ಬಿದ್ದರೆ 2 ದಿನ ಕೊರೊನಾ ಕರ್ಪ್ಯೂ ಮುಂದುವರೆಸುತ್ತೇವೆ. ವೀಕೆಂಡ್ ಲಾಕ್ ಡೌನ್ ಪ್ರಸ್ತಾಪ ಕೂಡ ಸರ್ಕಾರದ ಮುಂದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಬಿಟ್ಟು ಉಳಿದ ಕ್ರಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಲಾಗುವುದು. ಏಪ್ರಿಲ್ 18 ರಂದು ಸರ್ವ ಪಕ್ಷಗಳ ಸಭೆ ಕರೆಯಲಾಗಿದ್ದು, ಸಭೆ ಬಳಿಕ ಮುಂದಿನ ನಿರ್ಧಾರ ಮಾಡಲಾಗುವುದು.ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ ವಿಸ್ತರಣೆ ಮಾಡುವ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.



