ದಾವಣಗೆರೆ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಜಿಲ್ಲೆಯ ವಿವಿಧ ಕಡೆ ಸಂಭ್ರಮದಿಂದ ಆಚರಿಸಲಾಯಿತು.
ದಾವಣಗೆರೆಯ ಹದಡಿ ರಸ್ತೆಯಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗ ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ವಿಭಾಗ ಜಂಟಿಯಾಗಿ ಏರ್ಪಡಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆಯನ್ನು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ವೇಳೆ ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಮಾತನಾಡಿ, ಅಂಬೇಡ್ಕರ್ ವಿಶ್ವದ ಮಹಾನ್ ಚಿಂತಕರಲ್ಲಿ ಒಬ್ಬರಾಗಿದ್ದಾರೆ. ಅಂಬೇಡ್ಕರ್ ಶೋಷಿತರ ಬದುಕನ್ನು ಕಟ್ಟಿಕೊಳ್ಳಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಕೇವಲ ದಲಿತ ವರ್ಗದವರಲ್ಲದೇ ಇಡೀ ಸಮಾಜದಲ್ಲಿ ತುಳಿತಕ್ಕೆ ಒಳಗಾದ ಎಲ್ಲಾ ವರ್ಗದ ಜನರ ಧ್ವನಿಯಾಗಿ ಸಮಾನತೆ, ಸಹೋದರತೆಗಾಗಿ, ಮೇಲು-ಕೀಳು ಎಂಬ ಭೇದ-ಭಾವ ಇರಬಾರದೆಂದು ತಿಳಿಸಿದ್ದಾರೆ ಎಂದರು.
ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಹೆಚ್. ಸುಭಾನ್ ಸಾಬ್, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ರಾಷ್ಟ್ರೀಯ ಮಜ್ಬೂರ್ ವಿಭಾಗದ ಅಧ್ಯಕ್ಷ ಕೆ.ಎಂ. ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಮುಖಂಡ ಅಲ್ಲಾವಲಿ ಮುಜಾಹಿದ್, ಅಶ್ರಫ್ ಅಲಿ, ಶಶಿಅಂಗಡಿ, ಜೆ.ವಿ. ವೆಂಕಟೇಶ್, ಗೋಪಿ, ವಾಜಿದ್ ಖಾನ್, ರಫೀಕ್, ಪ್ರವೀಣ್, ರವಿಕುಮಾರ್, ಖಾನ್ಸಾಬ್, ಹಜ್ರತ್ ಅಲಿ, ನಾಗರಾಜ್, ಮುಪ್ಪಳ್ಳಿ ಹನುಮಂತ, ನಿಂಗಪ್ಪ, ಕೊಟ್ರೇಶ್, ಹೆಚ್.ವಿ.ರಂಗನಾಥ್, ಪ್ರಕಾಶ್, ಹಸನ್ ಅಲಿ, ಲಿಬಾರ್ಟಿ ಖಾನ್ ಸಾಬ್ ಸೇರಿದಂತೆ ಇತರರು ಹಾಜರಿದ್ದರು.
ಕಂದನಕೋವಿಯಲ್ಲಿ ಡಾ. ಬಿ.ಆರ್ . ಅಂಬೇಡ್ಕರ್ ನವ ಯುವಕರ ಸಂಘ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಜ್ಯೋತಿಬಾ ಪುಲೆ ಮಹಿಳಾ ವತಿಯಿಂದ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯನ್ನು ಜಿ.ಪಂ ಸದಸ್ಯ ಬಸವಂತಪ್ಪ ಉದ್ಘಾಟಿಸದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ತಿಪ್ಪೇ ಸ್ವಾಮಿ ಕೆ.ಎಸ್, ಕರಿಬಸಪ್ಪ ಕೆ.ಎಸ್, ಕಾಂಗ್ರೆಸ್ ಮುಖಂಡ ಮುದೇಗೌಡ್ರು ಗಿರೀಶ್ ಸೇರಿದಂತೆ ಗ್ರಾಮಸ್ಥರು ಇದ್ದರು.
ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮ ದಲಿತರ ಕಾಲೋನಿಯಲ್ಲಿ ಅಂಬೇಡ್ಕರ್ ರವರ 130 ನೇ ಜಯಂತಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮುಂಖಂಡರುಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.