ಡಿವಿಜಿ, ಸುದ್ದಿ, ದಾವಣಗೆರೆ: ಈ ಬಾರಿಯ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಮ್ಯೂನಿಷ್ಟ್ ಪಕ್ಷ 7 ರಿಂದ 8 ಸೀಟ್ ಗೆಲ್ಲುವ ವಿಶ್ವಾಸವಿದ್ದು, ಪಕ್ಷದ ಕಾರ್ಯಕರ್ತರು ಅಭ್ಯರ್ಥಿ ಗೆಲ್ಲಿಸುವಲ್ಲಿ ಶ್ರಮಿಸಬೇಕು ಎಂದು ಕಮ್ಯೂನಿಸ್ಟ್ ಪಕ್ಷದ ಹಿರಿಯ ಮುಖಂಡ ಎಚ್.ಕೆ. ರಾಮಚಂದ್ರಪ್ಪ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
ಚುನಾವಣಾ ಆಕಾಂಕ್ಷಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕಮ್ಯೂನಿಸ್ಟ್ ಪಕ್ಷದ ವತಿಯಿಂದ ರಾಜ್ಯದಲ್ಲಿನ ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಕಾರ್ಮಿಕರು, ಕೂಲಿ ಕಾರ್ಮಿಕರ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳ ಕುರಿತು ಹೋರಾಟ ಮಾಡಿದ್ದೇವೆ. ದಾವಣಗೆರೆಯಲ್ಲಿಯೂ ಅನೇಕ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಿದ್ದು, ಈ ಬಾರಿಯ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲಾ 45 ವಾರ್ಡ್ ಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕಲಿದ್ದು, ಕನಿಷ್ಟ 7 ರಿಂದ 8 ಸೀಟು ಗೆಲ್ಲುವ ವಿಶ್ವಾಸವಿದೆ ಎಂದರು.
ಈ ಹಿಂದೆ ಪಾಲಿಕೆ ಸದಸ್ಯರಾಗಿ ಕಾಂಮ್ರೆಡ್ ಪಂಪಾಪತಿ,ನಾನು ಸೇರಿದಂತೆ ಅನೇಕರು ಪಾಲಿಕೆ ಚುನಾವಣೆಯಲ್ಲಿ ನಿಂತು ಗೆದ್ದಿದ್ದೇವೆ. ಪಂಪಾಪತಿ ಅವರು ಪಾಲಿಕೆ ಸದಸ್ಯರಾಗಿದ್ದಾಗ ಹಾಕಿದ ಮರಗಳು ಇಂದಿಗೂ ನೆರಳು ನೀಡುತ್ತಿವೆ. ಆರಗೆರೆ ಉಮೇಶ್ ಪಾಲಿಕೆ ಸದಸ್ಯರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದ್ದು, ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಹೇಳಿದರು.
ಈ ಸಭೆಯಲ್ಲಿ ಆವರಗೆರೆ ಉಮೇಶ್, ಐರಣಿ ಚಂದ್ರು, ಸುರೇಶ್, ಲಕ್ಷ್ಮಣ್, ವಾಸು , ಚಂದ್ರು, ಆನಂದರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



