ದಾವಣಗೆರೆ: ತಾಲೂಕಿನ ಮುಡೇನಹಳ್ಳಿಯಲ್ಲಿ ದುಷ್ಕರ್ಮಿಗಳು ಫಲಕ್ಕೆ ಬಂದಿದ್ದ ನೂರಾರು ಅಡಿಕೆ ಮರಗಳನ್ನು ಕಡಿದು ಪರಾರಿಯಾಗಿದ್ದಾರೆ. ಇದರಿಂದ ರೈತ ದಿಕ್ಕು ತೋಚದಂತಾಗಿದ್ದಾನೆ.
ಆನಗೋಡು ಸಮೀಪದ ಮುಡೇನಹಳ್ಳಿಯ ಎನ್.ಬಸವರಾಜಪ್ಪ ಎಂಬುವವರು ಸೇರಿದಂತೆ ನಾಲ್ಕು ರೈತರಿಗೆ ಸೇರಿದ ಸುಮಾರು 100ಕ್ಕೂ ಹೆಚ್ಚು ಮರಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ತಡ ರಾತ್ರಿ ಬಂದು ಅಡಿಕೆ ಮರಗಳನ್ನು ಕಡಿದು ಹಾಕಿದ್ದಾರೆ.
ರೈತರು ಬೆಳಿಗ್ಗೆ ಜಮೀನಿಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಹಳೇ ದ್ವೇಷದ ಹಿನ್ನೆಲೆ ಈ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ರೈತನಿಗೆ ಸಂಕಷ್ಟ ಎದುರಾಗಿದೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



