ಸಾರಿಗೆ ನೌಕರರ ಪ್ರತಿಭಟನೆ ಬೆಂಬಲಿಸಿ ಪತ್ರ ಬರೆದ ನಟ ಯಶ್ ; ಸಾರಿಗೆ ಸಚಿವರೊಂದಿಗೆ ಚರ್ಚಿಸಿರುವುದಾಗಿ ಮಾಹಿತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ಆರನೇ ವೇತನಕ್ಕೆ ಆಗ್ರಹಿಸಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರಕ್ಕೆ ರಾಕಿಂಗ್ ಸ್ಟಾರ್ ಯಶ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಳೆದ ಕಳೆದ 9 ದಿನದಿಂದ  ಸಾರಿಗೆ ನೌಕರರ ಪ್ರತಿಭಟನೆ ನಡೆಯುತ್ತಿದೆ. ಈ ಬಗ್ಗೆ ನಾಕರರು ನಟ ಯಶ್ ಅವರಲ್ಲಿ ಪ್ರತಿಭಟನೆ ಬೆಂಬಲಿಸುವಂತೆ ಕೇಳಿಕೊಂಡಿದ್ದರು. ಈ ಬಗ್ಗೆ ಯಶ್ ಸಾರಿಗೆ ನೌಕರರ ಬೇಡಿಕೆ ಬೆಂಬಲ ನೀಡಿದ್ದು,  ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ಜೊತೆ ಚರ್ಚಿಸಿರುವ್ಉದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಇಂದು ತಮ್ಮ ಟ್ವಿಟರ್‍ ನಲ್ಲಿ ಪತ್ರವೊಂದನ್ನು ಪ್ರಕಟಿಸಿರುವ ಯಶ್,  ಪತ್ರ  ಈ ರೀತಿ ಇದೆ : ಇಂದು ನಿಮ್ಮ ಯಶ್ ಏನೇ ಆಗಿರಬಹುದು. ಅದರೆ ಅದಕ್ಕೂ ಮೊದಲು ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ಚಾಲಕನ ಪುತ್ರ. ಮನೆಯಲ್ಲಿ ನಾನು ತಡ ಮಾಡಿದ್ರೆ ದಿನಾಲೂ ನನ್ನ ಬಸ್ಸಿನಲ್ಲಿ ಬರೋ ಪ್ರಯಾಣಿಕರಿಗೆ ಟ್ರೈನ್ ಮಿಸ್ ಆಗುತ್ತೇನೋ, ಆಫೀಸ್ ಗೆ ಲೇಟ್ ಆಗುತ್ತೇನೋ..ಅಂತ ನಮ್ಮಪ್ಪ ಎಷ್ಟೋ ದಿನ ಬೆಳಗ್ಗೆ ಮನೆಯಲ್ಲಿ ತಿಂಡಿ ಕೂಡ ತಿನ್ನದೆ ಗಡಿಬಿಡಿಯಲ್ಲಿ ನಡೆಯುತ್ತಿದ್ದ ಆ ದಿನಗಳು ಈಗಲೂ ನೆನಪಾಗುತ್ತೆ.

ಬಹುಶಃ ಇದು ನನ್ನ ಅಪ್ಪನ ಕತೆ ಮಾತ್ರವಲ್ಲ. ಕರ್ತವ್ಯ ನಿಷ್ಠೆ ಮೆರೆವ ಸಾವಿರಾರು ಸೈರಗೆ ನೌಕರುಗಳ ದಿನಚರಿ ಹೀಗೆ ಇರುತ್ತೆ. ಸಾರಿಗೆ ಸಂಸ್ಥೆಯ ನೌಕರರು ಮತ್ತು ಪ್ರಯಾಣಿಕರ ನಡುವಿನ ಸಂಬಂಧ ಮತ್ತು ಸಹಕಾರ ಲೆಕ್ಕವಿಲ್ಲದಷ್ಟು ಗೆಳೆತನಗಳಿಗೆ ಸಾಕ್ಷಿಯಾಗಿದೆ. ಆದರೆ ನಮ್ಮ ಸಾರಿಗೆ ಸಂಸ್ಥೆಯ ನೌಕರರ ಸಂಬಳದ ತಾರತಮ್ಯ ವಿರಬಹುದು. ರಜೆಗಳಿಗಾಗಿ ನಡೆಯುವ ತಕರಾರುಗಳಿರಬಹುದು. ಓವರ್ ಡ್ಯೂಟಿಗಾಗಿ ನಡೆಯುವ ಜಟಾಪಟಿಗಳಿರಬಹುದು. ಎಲ್ಲವೂ ನಾನು ಹತ್ತಿರದಿಂದ ಬಲ್ಲವನು.

ನ್ಯಾಯ ಕೊಡಿ ಎಂದು ಪ್ರಾಮಾಣಿಕವಾಗಿ ಹೋರಾಟಕ್ಕಿಳಿದಿರುವ ಸಾರಿಗೆ ನೌಕರರ ಕೂಗು ಮತ್ತು ಸಾರಿಗೆ ಬಸ್ಸುಗಳ ಮೇಲೆಯೇ ಅವಲಂಬಿತವಾಗಿರುವ ಮಧ್ಯಮ ವರ್ಗದ ಜನರ ಅಳಲು. ಈ ಎರಡು ಕೂಡ ನನ್ನನ್ನು ಬಹುವಾಗಿ ಕಾಡುತ್ತಿದೆ.

ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ ಚಿಕ್ಕ ಪ್ರಯತ್ನವೆಂಬಂತೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರೊಂದಿಗೆ ಈ ಬಗ್ಗೆ ವಿವರವಾಗಿ ಮಾತನಾಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇನೆ.

‘ಸಮಾಧಾನದ ವಿಷಯ ಅಂದ್ರೆ ಸನ್ಮಾನ್ಯ ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರಿಗೆ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಇದ್ದ ಅರಿವು ಮತ್ತು ಕಳಕಳಿ, ಜೊತೆಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಗಳ ಬಗ್ಗೆ ಇದ್ದ ವೇತನ ತಾರತಮ್ಯವನ್ನು ತಪ್ಪದೆ ಈಡೇರಿಸುವ ಮಾತನ್ನು ನನಗೆ ಕೊಟ್ಟಿದ್ದು ಮತ್ತಷ್ಟು ಖುಷಿ ಕೊಡ್ತು ಎಂದು ಬರೆದುಕೊಂಡಿದ್ದಾರೆ.

ಸಮಸ್ಯೆಗೆ ಮತ್ತೊಂದು ಸಮಸ್ಯೆ ಎಂದಿಗೂ ಪರಿಹಾರವಲ್ಲ. ಬದಲಿಗೆ ಮುಕ್ತ ಮನಸ್ಸುಗಳ ಬಿಚ್ಚುಮಾತು ಈ ಸಮಸ್ಯೆಗೆ ಪರಿಹಾರವಾಗಬಲ್ಲದು ಎಂಬುದು ನನ್ನ ದೃಢ ವಿಶ್ವಾಸ. ವಿರಸ ಬಿಟ್ಟು ಸಾಮರಸ್ಯದೊಂದಿಗೆ ಮುನ್ನಡೆಯೋಣ ಎಂದಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *