ದಾವಣಗೆರೆ: ಜವಾಹರ್ ನವೋದಯ ವಿದ್ಯಾಲಯ, ದೇವರಹಳ್ಳಿಯಲ್ಲಿ 6 ನೇ ತರಗತಿಗಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಮಕ್ಕಳಿಗೆ ಪ್ರವೇಶ ಪರೀಕ್ಷೆಯನ್ನು ಮೇ 16 ರಂದು ಬೆಳಿಗ್ಗೆ 11 ಗಂಟೆಗೆ ನಡೆಸಲಾಗುವುದು.
ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ನವೋದಯ ವಿದ್ಯಾಲಯ ಸಮಿತಿ ವೆಬ್ಸೈಟ್ navodaya.gov.in, https://cbseitms.nic.in/index.aspx ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ- 08189-298061 ಗೆ ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



