ಬೆಂಗಳೂರು: ರಾಜ್ಯದ 8 ಜಿಲ್ಲೆಯಲ್ಲಿ ಏ.20 ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ. ಏ.20 ನಂತರ ಪ್ರಧಾನಿ ಅವರ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಅಧಿಕಾರಿಗಳ ತುತ್ತು ಸಭೆ ನಡೆಸಿದ ಬಳಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸ್ಥಿತಿ-ಗತಿಗಳ ಬಗ್ಗೆ ಅಧಿಕಾರಿಗಳು ಮತ್ತು ತಜ್ಞರ ಜೊತೆ ಒಂದುವರೆ ಗಂಟೆ ಮಾತನಾಡಿದ್ದೇನೆ. ಏ.20 ವರೆಗೆ 8 ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂದಿನ ವಾರ ಮತ್ತೆ ಸಭೆ ಸೇರಿ ಪ್ರಧಾನಿ ಅವರ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ನಮ್ಮ ರಾಜ್ಯವನ್ನು ಬೇರೆ ರಾಜ್ಯಕ್ಕೆ ಹೋಲಿಸಬೇಡಿ. ಇಲ್ಲಿನ ಪರಿಸ್ಥಿತಿಗೂ, ಅಲ್ಲಿನ ಪರಿಸ್ಥಿತಿಗೂ ಭಿನ್ನವಾಗಿದೆ. ಸ್ಥಿತಿ-ಗತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.



