ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರು ನಡೆಸುತ್ತಿರುವಂತ ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದ್ದು, ಮುಷ್ಕರ ನಿರತ 251 ತರಬೇತಿ ಸಿಬ್ಬಂದಿಗಳನ್ನು ಕೆ ಎಸ್ ಆರ್ ಟಿ ಸಿ ತನ್ನ ಆಯ್ಕೆ ಪಟ್ಟಿಯಿಂದ ತೆಗೆದು ಹಾಕಿದೆ.
ಮುಷ್ಕರದಲ್ಲಿ ನಿರತರಾಗಿದ್ದ ತರಬೇತಿ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾಗ್ಯೂ, ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೆ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ. ಅನಧಿಕೃತವಾಗಿ ಗೈರು ಹಾಜರಾಗಿರುವ 251 ತರಬೇತಿ ಸಿಬ್ಬಂದಿಗಳನ್ನು ಕೂಡಲೇ ಜಾರಿಗೆ ಬರುವಂತೆ ಆಯ್ಕೆ ಪಟ್ಟಿಯಿಂದ ತೆಗೆದುಹಾಕಲಾಗಿರುತ್ತದೆ ಎಂದು ಕೆಎಸ್ ಆರ್ ಟಿಸಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



