ಡಿವಿಜಿ ಸುದ್ದಿ, ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬಂದ ಹಣವನ್ನ ಕಾಂಗ್ರೆಸ್ ಪಕ್ಷ ದುರ್ಬಳಕೆ ಮಾಡಿಕೊಂಡಿದ್ದು, ಕಾಂಗ್ರೆಸ್ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಈ ಬಾರಿ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಚುಕ್ಕಾಣಿ ಹಿಡಿಯುವುದು ನೂರಕ್ಕೆ ನೂರು ಸತ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾದವ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಸಾಕಷ್ಟು ಅನುದಾನ ಬಂದಿದ್ದರೂ, ಕಾಂಗ್ರೆಸ್ ಪಕ್ಷ ಸರಿಯಾಗಿ ಸದುಪಯೋಗ ಮಾಡಿಕೊಂಡಿಲ್. ಮಹಾನಗರ ಪಾಲಿಕೆ ಆಡಳಿತದ ಚುಕ್ಕಾಣಿ ಹಿಡಿದಂತಹ ಕಾಂಗ್ರೆಸ್ ಪಕ್ಷದ ದುರಾಡಳಿತವನ್ನು ಜನರು ಗಮನಿಸಿದ್ದು, ಈ ಬಾರಿ ಬಿಜೆಪಿಗೆ ಬೆಂಬಲ ನೀಡುವಂತ ವಾತಾವರಣ ನಿರ್ಮಾಣವಾಗಿದೆ ಎಂದರು.
ಕಳೆದ ಸಲ 39 ಸದಸ್ಯರು ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದರೂ ಯಾವುದೇ ಹೇಳಿಕೊಳ್ಳುವಂತಹ ಕೆಲಸವಾಗಿಲ್ಲ. ನಾವು ವಾರ್ಡ್ ಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜನರು ಕಾಂಗ್ರೆಸ್ ಪಾಲಿಕೆ ಸದಸ್ಯರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉತ್ತರ ಮತ್ತು ದಕ್ಷಿಣದಲ್ಲಿ ಅಪ್ಪಮಕ್ಕಳಾದ ಎಸ್ಸೆಸ್ ಮತ್ತು ಎಸ್ ಎಸ್ ಎಂ ಇಬ್ಬರು ಇದ್ದರು ಸಹ ಸ್ಮಾರ್ಟ್ ಸಿಟಿ ಯೋಜನೆಗೆ ಬಂದಂತ ಅನುದಾನವನ್ನು ಸದ್ಬಳಕ್ಕೆ ಮಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಎಲ್ಲೆಂದರೆಲ್ಲಿ ರಸ್ತೆ, ಚರಂಡಿಗಳನ್ನು ಸುಖಾಸುಮ್ಮನೆ ಕಿತ್ತುಹಾಕಿದ್ದಾರೆ. ಕೆಲಸಗಳು ಕೂಡ ಅರ್ಧಕ್ಕೆ ನಿಂತಿವೆ. ಇದರಿಂದ ಜನ ಬೇಸತ್ತಿದ್ದು, ಈ ಬಾರಿ ಬಿಜೆಪಿ ಪಾಲಿಕೆ ಚುನಾವಣೆ ಹಿಡಿಯುವುದರಲ್ಲಿ ಬಿಜೆಪಿ ಗೆಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ನನ್ನ ಅಧಿಕಾರವಧಿಯಲ್ಲಿ ಏನಾದರು ಅವ್ಯವಹಾರ ನಡೆದಿದ್ದರೆ, ದಾಖಲೆ ಸಹಿತ ತರಲಿ ಬಹಿರಂಗ ಸವಾಲನ್ನು ಕೂಡ ಹಾಕಿದರು.ಮೀಸಲಾತಿ ಅನುಸಾರವಾಗಿ ಬಿಜೆಪಿ ಪಕ್ಷಕ್ಕೆ ಈಗಾಗಲೇ ೪೦೦ ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಎಸ್.ಎ.ರವೀಂದ್ರನಾಥ್ ಸೇರಿದಂತೆ ಜಿಲ್ಲೆಯ ಎಲ್ಲಾ ಆರು ಜನ ಶಾಸಕರು, ಮಾಜಿ ಶಾಸಕರು, ಮಾಜಿ ಮೇಯರ್ ಗಳು ಹೀಗೆ ಪಕ್ಷದ ಎಲ್ಲಾ ಹಿರಿಯ ಮುಖಂಡರುಗಳನ್ನೊಳಗೊಂಡ ಸಭೆ ನಡೆಯಲಿದೆ.
ನಾಳೆ ಸಂಜೆ 5 ಗಂಟೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಜಿಲ್ಲಾ ಕೋರ್ ಕಮಿಟಿ ಸಭೆಯನ್ನು ಸಹ ನಡೆಸಿ ಯಾವ ವಾರ್ಡ್ ಗೆ ಯಾವ ಮೀಸಲಾತಿ ಬಂದಿದೆ. ಮಹಿಳಾ ಮೀಸಲಾತಿ ಎಷ್ಟಿದೆ ಎಂಬುದನ್ನು ಪರಿಶೀಲಿಸಿ ಅರ್ಹ ಅಭ್ಯರ್ಥಿ ಗುರುತಿಸಿ ಟಿಕೆಟ್ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಹೆಚ್.ಎನ್.ಶಿವಕುಮಾರ್, ಎನ್.ರಾಜಶೇಖರ್, ರಾಜನಹಳ್ಳಿ ಶಿವಕುಮಾರ್, ಪಿ.ಸಿ.ಶ್ರೀನಿವಾಸ್, ಹೆಚ್.ಸಿ.ಜಯಮ್ಮ, ಡಿ.ಕೆ.ಕುಮಾರ್, ಪಂಚಣ್ಣ, ಆನಂದರಾವ್ ಶಿಂಧೆ, ಟಿಂಕರ್ ಮಂಜಣ್ಣ ಸೇರಿದಂತೆ ಮತ್ತಿತರರಿದ್ದರು.



