Connect with us

Dvgsuddi Kannada | online news portal | Kannada news online

ದಾವಣಗೆರೆ: SSLC, ITI,BE ವಿದ್ಯಾರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: SSLC, ITI,BE ವಿದ್ಯಾರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: 2021-22 ನೇ ಸಾಲಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ  ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜಿವನೋಪಾಯ ಇಲಾಖೆಯಡಿಯಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ-ಟಿಎಸ್‍ಪಿ) ಮೂಲಕ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಲು ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ, ಐ.ಟಿ.ಐ, ಡಿಪ್ಲೋಮ, ಬಿ.ಇ ಪಾಸ್ ಆಗಿರುವ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ಯುವತಿಯರಿಗೆ 2 ಮತ್ತು 4 ತಿಂಗಳ ಅವಧಿಯ ವಿವಿಧ ಉಚಿತ ತರಬೇತಿ ನೀಡಿ ಉದ್ಯೋಗವಕಾಶ ಕಲ್ಪಿಸಲಾಗುವುದು.

ಡೊಮೆಸ್ಟಕ್ ಡಾಟಾ ಎಂಟ್ರಿ ಆಪರೇಟರ್, ಸಿ.ಎನ್.ಸಿ ಆಪರೇಟ್ ಟರ್ನಿಂಗ್, ಸಿ.ಎನ್.ಸಿ ಪ್ರೋಗ್ರಾಮರ್, ಕನ್‍ವೆನ್‍ಷನಲ್ ಟರ್ನಿಂಗ್ ಮಷಿನ್ ಆಪರೇಟರ್, ಮಿಲ್ಲಂಗ್ ಮಷಿನ್ ಆಪರೇಟರ್, ಸರ್ಫೇಸ್ ಗ್ರೈಂಡಿಂಗ್ ಮಷಿನ್ ಆಪರೇಟರ್, ಡಿಸೈನರ್-ಮೆಕಾನಿಕಲ್, ಪ್ರೊಡಕ್ಷನ್ ಇಂಜಿನಿಯರ್ ಕೋರ್ಸ್‍ಗಳಲ್ಲಿ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು.

ತರಬೇತಿ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು. ತರಬೇತಿ ಮುಗಿದ ನಂತರ ಉದ್ಯೋಗವಕಾಶಕ್ಕೆ ಮಾರ್ಗದರ್ಶನ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಏ.30 ಕೊನೆಯ ದಿನಾಂಕ ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಜಿ.ಟಿ.ಟಿ.ಸಿ, 22ಸಿ&ಡಿ, ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯ, ಹರ್ಲಾಪುರ, ಕೆಎಸ್‍ಆರ್‍ಟಿಸಿ ಡಿಪೋ ಹತ್ತಿರ ಹರಿಹರ ದೂರವಾಣಿ ಸಂಖ್ಯೆ: 08192243937, 9916908111, 8884488202, 8711913947 ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top