ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾ ಸ್ಫೋಟ ಸಂಭವಿಸಿದ್ದು, ಒಂದೇ ದಿನ 26,962 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಇವತ್ತು ಒಂದೇ ದಿನ 190 ಸೋಂಕಿತರು ಸಾವನ್ನಪ್ಪಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 12,74,959 ಏರಿಕೆಯಾಗಿದ್ದು, ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದ 14,075 ಜನ ಮೃತಪಟ್ಟಿದ್ದಾರೆ. ಇವತ್ತು 8697 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 10,46,554 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 2,14,311 ಕ್ಕೆ ಏರಿಕೆಯಾಗಿದ್ದು, ಐಸಿಯುನಲ್ಲಿ 1128 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಲ್ಲಿ ಒಂದೇ ದಿನ 16,662 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆಬೆಂಗಳೂರಿನಲ್ಲಿ ಇವತ್ತು 124 ಸೋಂಕಿತರು ಸಾವನ್ನಪ್ಪಿದ್ದು. 1,49,624 ಸಕ್ರಿಯ ಪ್ರಕರಣಗಳು ಇವೆ



