ಬೆಂಗಳೂರು: ರಾಜ್ಯದಲ್ಲಿ 18 ವರ್ಷದಿಂದ 45 ವರ್ಷದೊಳಗಿನ ಎಲ್ಲರಿಗೂ ಮೇ 01ರಿಂದ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಸಚಿವ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, 18 ವರ್ಷದಿಂದ 45 ವರ್ಷದದೊಳಗಿನ ಎಲ್ಲರೂ ಸರ್ಕಾರಿ ಆಸ್ಪತ್ರೆಯಲ್ಲಿ ನೋಂದಣಿ ಮಾಡಿಕೊಂಡು ಉಚಿತವಾಗಿ ಕೊರೊನಾ ಲಸಿಕೆ ಪಡೆಯಬಹುದು. 45 ವರ್ಷದಿಂದ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಲಸಿಕೆ ನೀಡಲಿದೆ ಎಂದು ತಿಳಿಸಿದರು.



