ಚನ್ನಗಿರಿ: ಕೊರೊನಾ ಸಂಕಷ್ಟದಿಂದ ಜನರು ಸುಧಾರಣೆಯೇ ಕಂಡಿಲ್ಲ, ಇದೀಗ ಮತ್ತೊಮ್ಮೆ 14 ದಿನದ ಕೊರೊನಾ ಕರ್ಫ್ಯೂ ಜಾರಿ ಮಾಡಲಾಗಿದೆ. ಇದು ಬಡವರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಸರ್ಕಾರ ಬಡವರಿಗೆ ಆರ್ಥಿಕ ನೆರವು ನೀಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ವಿ. ಶಿವಗಂಗಾ ಆಗ್ರಹಿಸಿದ್ದಾರೆ.
ಕಳೆದ ವರ್ಷ ಲಾಕ್ ಡೌನ್ ಹಾಗೂ ಸೀಲ್ ಡೌನ್ ಹಿನ್ನೆಲೆ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದ ಇನ್ನೂ ಚೇತರಿಕೆ ಕಂಡಿಲ್ಲ. ಇದೀಗ ಮತ್ತೆ ಕೊರೊನಾ 2 ನೇ ಅಲೆ ಎದ್ದಿದ್ದು ಜನ ಸಾಮಾನ್ಯರು ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಈ ನಡುವೆ ಸರ್ಕಾರ ಲಾಕ್ ಡೌನ್ ಮಾಡಿದ್ದು ರಾಜ್ಯದ ಜನರಿಗೆ ಮತ್ತಷ್ಟು ಸಮಸ್ಯೆ ಉಂಟಾಗಲಿದೆ ಎಂದರು. ಸರ್ಕಾರ ದಿನದ ಕೊರೊನಾ ಕರ್ಫ್ಯೂ ಮಾಡಿರುವುದು ಸರಿಯಾದ ಕ್ರಮವೇ ಸರಿ ಆದ್ರೆ ಕೂಲಿ ಮಾಡಿ ಜೀವನ ನಡೆಸುವ ಬಡ ವರ್ಗದ ಜನರ ಸಂಕಷ್ಟಕ್ಕೂ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.
ಆಟೋ, ಟ್ಯಾಕ್ಸಿ ಚಾಲಕರು, ದಿನಗೂಲಿ ಕಾರ್ಮಿಕರು ಸೇರಿದಂತೆ ಇತರೆ ಬಡ ವರ್ಗದ ಜನರಿಗೆ ಸರ್ಕಾರ ಆರ್ಥಿಕ ಸಹಾಯ ಮಾಡಬೇಕು. ಲಾಕ್ ಡೌನ್ ನಿಂದ ಕೆಲಸವಿಲ್ಲದ ಜನರು ಪರದಾಡುತ್ತಾರೆ, ಕುಟುಂಬ ನಿರ್ವಹಣೆ ಮಾಡುವುದು ಕಷ್ಟವಾಗುತ್ತದೆ, ಬಡತನರೇಖೆಗಿಂತ ಕೆಳಗಿರುವ ಜನರಿಗೆ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿ ಕೂಡಲೇ ಹಣ ಬಿಡುಗಡೆ ಮಾಡಬೇಕು, ನೇರವಾಗಿ ಬಡವರಿಗೆ ಹಣ ತಲುಪಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಕೊರೊನಾ ವನ್ನ ಎದುರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲತೆಯಾಗಿದೆ, ಆಡಳಿತ ಮಾಡುವ ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯೇ ಕಾರಣ ಎಂದು ಆರೋಪಿಸಿದರು. ಇದೀಗ ಕೊರೊನಾ ಮತ್ತಷ್ಟು ಹೆಚ್ಚಾಗುತ್ತಿದೆ, ಇದರ ನಿಯಂತ್ರಣ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಜನಸಾಮಾನ್ಯರು ಪರದಾಡುವಂತಾಗಿದೆ. ಸರ್ಕಾರ ಕೂಡಲೇ ಬಡವರು, ದಿನಗೂಲಿ ಕಾರ್ಮಿಕರು ಮತ್ತು ಶ್ರಮಿಕ ವರ್ಗಕ್ಕೆ ಕನಿಷ್ಟ 5 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.



