ದಾವಣಗೆರೆ: ಶವ ಸಾಗಿಸಲು ಜಿಲ್ಲಾಡಳಿತದಿಂದ 2, ಪಾಲಿಕೆಯಿಂದ 1 ಉಚಿತ ಮುಕ್ತಿ ವಾಹಿನಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ಜಿಲ್ಲಾಸ್ಪತ್ರೆಯ ವತಿಯಿಂದ 02 ಮತ್ತು ಮಹಾ ನಗರಪಾಲಿಕೆಯ 01 ಮುಕ್ತಿವಾಹಿನಿ ಸೇರಿದಂತೆ ಒಟ್ಟು 03 ಶವ ಸಾಗಿಸುವ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಈ ವಾಹನಗಳ ಮೂಲಕ ಶವ ಸಾಗಿಸಲು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಪಾಲಿಕೆ ಮುಕ್ತಿವಾಹಿನಿಗೆ ಡಾ.ಸಂತೋಷ್‍ ಕುಮಾರ್ ಮೊಬೈಲ್ ಸಂಖ್ಯೆ 9448655704  ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ  ಹೇಳಿದರು.

ಬುಧವಾರ ವಿಡಿಯೋ ಕಾನ್ಫರೆನ್ಸ್  ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳೊಂದಿಗೆ  ಜಿಲ್ಲಾಉಸ್ತುವಾರಿ ಮತ್ತು ನಗರಾಭಿವೃದ್ದಿ  ಸಚಿವ  ಭೈರತಿ ಬಸವರಾಜ ವಿಡಿಯೋ ಕಾನ್ಫರೆನ್ಸ್  ನಡೆಸಿದರು. ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಜೊತೆಗೆ ಕೋವಿಡ್ ಔಷಧಿಗಳು, ಆಕ್ಸಿಜನ್ ಮತ್ತು ಲಸಿಕೆ ಸಮರ್ಪಕ ನಿರ್ವಹಣೆಯೊಂದಿಗೆ ರೈತರು, ಕೈಗಾರಿಕೆಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಕ್ರಮ ವಹಿಸಬೇಕೆಂದರು. ಈ ವೇಳೆ ಡಿಸಿ, ಎಸ್‍ಪಿ, ಡಿಹೆಚ್‍ಓ, ತಾಲ್ಲೂಕುಗಳ ತಹಶೀಲ್ದಾರರು ಮತ್ತು ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ, ರೆಮಿಡಿಸಿವರ್ ಸೇರಿದಂತೆ ಇತರೆ ಔಷಧಿಗಳು ಮತ್ತು ಆಕ್ಸಿಜನ್, ಬೆಡ್ ಇನ್ನಾವುದೇ ರೀತಿಯ ಕೊರತೆಗಳು ಕಂಡುಬಂದಲ್ಲಿ ತಕ್ಷಣ ನನ್ನ ಗಮನಕ್ಕೆ ತರಬೇಕು. ತಾವು ಮುಖ್ಯಮಂತ್ರಿಗಳು, ಆರೋಗ್ಯ ಮಂತ್ರಿಯವರೊಂದಿಗೆ ಪ್ರತಿ ದಿನದ ವರದಿ ನೀಡುತ್ತಿದ್ದು, ಈ ಬಗ್ಗೆಯೂ ಸಮಾಲೋಚಿಸಿ ಶೀಘ್ರದಲ್ಲೇ ಸಮರ್ಪಕ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಜಿಲ್ಲೆಯ ಹೊರಭಾಗದಿಂದ ಬಂದವರಿಗೆ ಕೋವಿಡ್ ಲಕ್ಷಣವಿದ್ದಲ್ಲಿ ತಕ್ಷಣ ಪರೀಕ್ಷೆ ಮಾಡಿ ಫಲಿತಾಂಶ ಬರುವವರೆಗೆ ಅವರನ್ನು ಹೋಂ ಕ್ವಾರಂಟೈನ್‍ನಲ್ಲಿ ಇರುವಂತೆ ನೋಡಿಕೊಳ್ಳಬೇಕಿರುವುದು ಆರೋಗ್ಯ ಇಲಾಖೆ ಜವಾಬ್ದಾರಿಯಾಗಿದೆ. ಹೊಸ ಮಾರ್ಗಸೂಚಿಗಳ ಜಾರಿಗೆ ಪೊಲೀಸ್ ಇಲಾಖೆಗೆ ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಗೃಹರಕ್ಷಕದಳ ಸಿಬ್ಬಂದಿಗಳ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದ್ದು ಎಸ್‍ಪಿ ಯವರು ಇವರನ್ನು ಬಳಸಿಕೊಂಡು ಕಠಿಣ ನಿಯಮಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಂಬುಲೆನ್ಸ್ ಇರುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರತಿಕ್ರಿಯಿಸಿ ಕೋವಿಡ್ ರೋಗಿಗಳಿಗೆ ರೆಮಿಡಿಸಿವರ್ ಒಂದೇ ಪರಿಣಾಮಕಾರಿ ಚಿಕಿತ್ಸೆ ಅಲ್ಲ. ಇತರೇ ಲಸಿಕೆಗಳು ಮತ್ತು ಆಂಟಿಬಯಾಟಿಕ್‍ಗಳ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ಇಂಡೆಂಟ್ ಹಾಕಲಾಗಿದೆ. ಆ ಔಷಧಿಗಳನ್ನು ಜಿಲ್ಲಾಸ್ಪತ್ರೆಗೆ ಶೀಘ್ರವಾಗಿ ಸರಬರಾಜು ಮಾಡಲು ಕ್ರಮ ವಹಿಸಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ಹಾಗೂ ಜಿಲ್ಲೆಯಲ್ಲಿ ಜನರು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಪಡೆಯಲು ಬರುತ್ತಿದ್ದು, ಪ್ರಸ್ತುತ ದಿನಕ್ಕೆ 13 ಸಾವಿರ ಜನರಿಗೆ ನೀಡುವ ಗುರಿ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ 20 ಸಾವಿರದವರೆಗೆ ಲಸಿಕೆ ನೀಡಲು ಅಗತ್ಯವಾದ ಲಸಿಕೆಗಳ ಸರಬರಾಜು ಮಾಡಬೇಕೆಂದು ಸಚಿವರಲ್ಲಿ ಕೋರಿದರು.

ಡಿಹೆಚ್‍ಓ ಡಾ.ನಾಗರಾಜ ಮಾತನಾಡಿ, 45 ವರ್ಷ ಮೇಲ್ಪಟ್ಟವರಿಗೆ ಇಲ್ಲಿಯವರೆಗೆ 1,55,204 ಜನರಿಗೆ ಲಸಿಕೆ ನೀಡಲಾಗಿದೆ. 1,86,667 ಆರೋಗ್ಯ ಮತ್ತು ಫ್ರಂಟ್‍ಲೈನ್ ಉದ್ಯೋಗಿಗಳಿಗೆ ಲಸಿಕೆ ನೀಡಲಾಗಿದೆ. ಇಂದಿಗೆ ಸಾಕಾಗುವಷ್ಟು ರೆಮಿಡಿಸಿವರ್ ಲಸಿಕೆ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿದ್ದು, ಇಂದು ಎರಡು ಕಂಪೆನಿಗಳಿಂದ ರೆಮಿಡಿಸಿವರ್ ಲಸಿಕೆ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆಯಾಗಲಿದೆ ಎಂದರು.

ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಜಯಪ್ರಕಾಶ್ ಮಾತನಾಡಿ, ಸಿ.ಜಿ ಆಸ್ಪತ್ರೆಯಲ್ಲಿ ಒಟ್ಟು 930 ಬೆಡ್ ಸಾಮಥ್ರ್ಯ ಇದ್ದು, ಇದರಲ್ಲಿ 300 ಬೆಡ್‍ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿರಿಸಿದ್ದು, ಈ ಪೈಕಿ 30 ಆಕ್ಸಿಜನ್ ಬೆಡ್‍ಗಳಿವೆ. ಪ್ರಸ್ತುತ ಆಕ್ಸಿಜನ್‍ಗೆ ಕೊರತೆ ಇಲ್ಲ. 270 ಆಕ್ಸಿಜನ್ ಸಿಲಿಂಡರ್‍ಗಳು ಮತ್ತು 80 ವಯಲ್ ರೆಮಿಡಿಸಿವರ್ ಲಭ್ಯತೆ ಇದೆ ಎಂದರು.

ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್‍ಎಲ್‍ಓಗಳಾದ ರೇಷ್ಮಾ ಹಾನಗಲ್, ಸರೋಜ, ತಹಶೀಲ್ದಾರ್ ಗಿರೀಶ್, ಆರ್‍ಸಿಹೆಚ್‍ಓ ಡಾ.ಮೀನಾಕ್ಷಿ, ಡಾ. ನಟರಾಜ್, ಡಾ.ಗಂಗಾಧರ್, ಡಾ.ರೇಣುಕಾರಾಧ್ಯ, ಡಾ.ಯತೀಶ್, ಟಿಹೆಚ್‍ಓ ಡಾ.ವೆಂಕಟೇಶ್, ಇತರೆ ಅಧಿಕಾರಿಗಳು ಇದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *