ನವದೆಹಲಿ : ಕೊರೊನಾದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
88 ವರ್ಷದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಪ್ರಧಾನಿಯಾದ ಮನಮೋಹನ್ ಸಿಂಗ್ ಅವರನ್ನು ಏಪ್ರಿಲ್ 19ರಂದು ಏಮ್ಸ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಕೊವಾಕ್ಸಿನ್ ನ ಎರಡು ಲಸಿಕೆ ಡೋಸ್ ಗಳನ್ನು ಪಡೆದಿದ್ದರೂ ಏಪ್ರಿಲ್ 19ರಂದು ಕೊರೊನಾ ಸೋಕು ತಗುಲಿತ್ತು. ಆದ್ದರಿಂದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.



