ಬೆಂಗಳೂರು: ರಾಜ್ಯದಲ್ಲಂದು ಒಂದೇ ದಿನ 35,024 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 14,74,846 ಕ್ಕೆ ಏರಿಕೆಯಾಗಿದೆ. ಇಂದು 270 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 14,142 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 11,10,025 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇನ್ನೂ 3,49,496 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇದುವರೆಗೆ 15,306 ಸೋಂಕಿತರು ಸಾವನ್ನಪ್ಪಿದ್ದಾರೆ., 2431 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 19,637 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 143 ಜನರು ಸಾವನ್ನಪ್ಪಿದ್ದಾರೆ. 2,37,518 ಸಕ್ರಿಯ ಪ್ರಕರಣಗಳು ಇವೆ.



