ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ 14 ದಿನ ಕರ್ಫ್ಯೂ ವಿಧಿಸಿದೆ. ಇದು ಮುಂದುವರೆಯುವ ಬಗ್ಗೆ ಸ್ವತಃ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರದಿದ್ದರೆ ಕರ್ಪ್ಯೂ ಮುಂದುವರೆಸುವುದು ಅನಿವಾರ್ಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರ ಈಗಾಗಲೇ ಏ.27ರ ರಾತ್ರಿಯಿಂದ 14 ದಿನ ಕರ್ಫ್ಯೂ ಜಾರಿ ಮಾಡಿದೆ. ಮೇ 12 ಕ್ಕೆ ಈ ಕರ್ಫ್ಯೂ ಅಂತ್ಯವಾಗಲಿದ್ದು, ಕೊರೋನಾ ಹೆಚ್ಚಾದರೆ ಅದನ್ನೇ ಮತ್ತೆ ಮುಂದುವರಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಹ ಈ ಹಿಂದೆ ತಿಳಿಸಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಕಡಿಮೆಯಾಗಬೇದ್ರೆ, ಈ ಲಿಂಕ್ ಕಡಿತಗೊಳಿಸಬೇಕಿದೆ. ಕರ್ಪ್ಯೂ ಜಾರಿ ಮಾಡಲಾಗಿದೆ. ಜನರು ಜವಾಬ್ದಾರಿಯಿಂದ ಸಹಕರಿಸಬೇಕು. ಇಲ್ಲದಿದ್ರೆ ಮತ್ತೆ ಕರ್ಪ್ಯೂ ಮುಂದುವರೆಸುವುದು ಎಂದು ಹೇಳಿದರು.



