ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಈ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ (ಮೇ.03) ರಂದು ಕಾಂಗ್ರೆಸ್ ಶಾಸಕರು, ಸಂಸದರು ಹಾಗೂ ಪಕ್ಷದ ಪ್ರಮುಖರ ಸಭೆ ಕರೆದಿದ್ದಾರೆ.
ಸೋಮವಾರ ಬೆಳಗ್ಗೆ 11 ಗಂಟೆ ಸಭೆ ನಡೆಯಲಿದ್ದು ವರ್ಚುವಲ್ (ವಿಡಿಯೋ ಕಾನ್ಫರೆನ್ಸ್) ಮೂಲಕ ಎಲ್ಲರೂ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ ಲೋಪ-ದೋಷ ಹಾಗೂ ಅದನ್ನು ಸರಿಪಡಿಸುವ ಬಗ್ಗೆ ಅನುಸರಸಬೇಕಾದ ಕ್ರಮದ ಬಗ್ಗೆ ಚರ್ಚಿಸುವ ಸಲುವಾಗಿ ಈ ಸಭೆಯನ್ನು ಕರೆಯಲಾಗಿದೆ.
ವಿಧಾನಸಭೆ, ಪರಿಷತ್ ಸದಸ್ಯರು, ಲೋಕಸಭಾ ರಾಜ್ಯಸಭೆ ಸದಸ್ಯರು ಈ ಸಭೆಯಲ್ಲಿ ಭಾಗಿಯಾಗಲಿದ್ದು, ಮುಂದಿನ ದಿನಗಳಲ್ಲಿ ಸರ್ಕಾರವನ್ನು ಯಾವ ರೀತಿಯಲ್ಲಿ ತರಾಟೆಗೆ ತೆಗೆದುಕೊಳ್ಳಬೇಕು. ಯಾವ ಬೇಡಿಕೆ ಮುಂದಿಟ್ಟು ಸರ್ಕಾರವನ್ನು ಎಚ್ಚರಿಸಬೇಕು ಎಂಬ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ.



