ಬೆಂಗಳೂರು: ಕೊರೊನಾ ಅಬ್ಬರದ ಮಧ್ಯೆ ರಾಜ್ಯದ ಬೆಳಗಾವಿ ಲೋಕಸಭೆ, ಬಸವ ಕಲ್ಯಾಣ ವಿಧಾನ ಸಭೆ ಹಾಗೂ ಮಸ್ಕಿ ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಇಂದು ನಡೆಯುತ್ತಿದೆ. ಬೆಳಗಾವಿ, ಬಸವ ಕಲ್ಯಾಣದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೂ ಮಸ್ಕಿಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 1,17,549 ಮತಗಳನ್ನು ಪಡೆದಿರುವ ಅವರು, 11,213 ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಅಭ್ಯರ್ಥಿ 107401 ಮತಗಳನ್ನು ಪಡೆದಿದ್ದಾರೆ.
ಮಸ್ಕಿಯಲ್ಲಿ 9 ನೇ ಸುತ್ತಿನ ಮತಗಳ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ 10996 ಮತಗಳ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್ 18,378 ಮತಗಳು ಬಂದಿವೆ.
ಬಸವ ಕಲ್ಯಾಣ ಉಪಚುನಾವಣೆ ಮತ ಎಣಿಕೆಯ 9ನೇ ಸುತ್ತಿನ ಮತ ಎಣಿಕೆ ಮುಗಿದಿದೆ.ಬಿಜೆಪಿಯ ಶರಣು ಸಲಗರ 7355 ಮತಗಳ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನ ಮಾಲಾ ನಾರಾಯಣರಾವ್ 15999 ಮತಗಳನ್ನು ಪಡೆದಿದ್ದಾರೆ.