ಬೆಂಗಳೂರು: ಆಸ್ಪತ್ರೆಯಲ್ಲಿ ಬೆಡ್ ಬ್ಲಾಕಿಂಗ್ ದಂಧೆಯನ್ನು ಸರ್ಕಾರ ಗಂಭೀರವಾಗಿ ತಗೆದುಕೊಂಡಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈಗಾಗಲೇ ಹಲವಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇನ್ನೂ ಹಲವರನ್ನ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುವುದು.ಈ ಪ್ರಕರಣವನ್ನ ಸಮಗ್ರವಾಗಿ ತೆನಿಖೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಸಹ ಮಾಡಲಾಗಿದೆ. ಬಿಬಿಎಂಪಿ ಎಲ್ಲ ವಲಯದಲ್ಲೂ ಈ ರೀತಿಯ ನಡೆದಿರಬಹುದು. ಹೀಗಾಗಿ ಎಲ್ಲ ವಲಯಕ್ಕೂ ವಿಸ್ತರಣೆ ಮಾಡುವುದಾಗಿ ಪ್ರಕಟಿಸಿದರು.
ಬೆಡ್ ಬ್ಲಾಕಿಂಗ್ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ ಬೆಳಕಿಗೆ ತಂದಿದ್ದಾರೆ. ಪ್ರಕರಣ ಕುರಿತು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಅವರ ಗಮನಕ್ಕೂ ತರಲಾಗುವುದು. ಜಯನಗರದಲ್ಲೂ ಸಹ ದಾಖಲಾಗಿದೆ ಎಂದರು.



