ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ನಿಟ್ಟುವಳ್ಳಿಯಲ್ಲಿರುವ ಕಾರ್ಮಿಕರ ರಾಜ್ಯ ವಿಮಾ ಆಸ್ಪತ್ರೆಯನ್ನು (ಇಎಸ್ ಐ) ಎರಡ್ಮೂರು ದಿನದಲ್ಲಿ80 ಕೋವಿಡ್ ರೋಗಿಗಳಿಗೆ ಬೆಡ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅನುಮತಿ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ನಿಟ್ಟುವಳ್ಳಿಯ ಇಎಸ್ ಐ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಹೆಚ್ಚಿರುವ ಹಿನ್ನೆಲೆ ಕೋವಿಡ್ ಆಸ್ಪತ್ರೆ ಸಾಮಾರ್ಥ್ಯ ಹೆಚ್ಚಿಸಿಕೊಳ್ಳಲು ಅನುಮತಿ ಕೇಳಲಾಗಿತ್ತು. ಇದೀಗ ಸರ್ಕಾರ ಅನುಮತಿ ನೀಡಿದ್ದು, ಎರಡ್ಮೂರು ದಿನದಲ್ಲಿ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡು ಮಾಡಲಾಗುವುದು. ಇಲ್ಲಿ ವೆಂಟಲೆಟರ್ ಸಮಸ್ಯೆ ಇದೆ. ಸಾಮಾನ್ಯ ರೋಗಿಗಳಿಗೆ ವ್ಯವಸ್ಥೆ ಮಾಡಲಾಗುವುದು. ರೋಗಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ನಾಲ್ಕೈದು ದಿನ ಪರಿ ವೀಕ್ಷಣೆಗೆ ಒಳಪಡುವವರನ್ನು ಇಲ್ಲಿಗೆ ಶಿಫ್ಟ್ ಮಾಡಲಾಗುವುದು ಎಂದು ತಿಳಿಸಿದರು.

ನಿನ್ನೆ ಇಎಸ್ ಐ ಆಸ್ಪತ್ರೆ ಬಳಸಿಕೊಳ್ಳಲು ಅನುಮತಿ ಸಿಕ್ಕಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಇಎಸ್ ಐ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಡು ಮಾಡಲು ಸೂಚಿಸಿದ್ದೇನೆ ಎಂದರು.



