ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯಲ್ಲಿ ಮುಚ್ಚಿರುವ ವಿಐಎಸ್ ಎಲ್ ಕಾರ್ಖಾನೆಯಲ್ಲಿ ಆಕ್ಸಿಜನ್ ಉತ್ಪಾದನೆ ಕುರಿತು ಚರ್ಚಿಸಲು ಸಚಿವ ಜಗದೀಶ್ ಶೆಟ್ಟರ್, ವಿಐಎಸ್ ಎಲ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಗದೀಶ್ ಶೆಟ್ಟರ್ ಅವರೊಂದಿಗೆ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಸಂಗಮೇಶ್ವರ್ ಭಾಗಿಯಾಗಿದ್ದರು. ಈ ವೇಳೆ ಅಧಿಕಾರಿಗಳಿಂದ ಆಕ್ಸಿಜನ್ ಉತ್ಪಾದನೆ ಸಾಮರ್ಥ್ಯದ ಬಗ್ಗೆ ಮಾಹಿತಿ ಪಡೆದರು.ಬಳಿಕ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ವಿಐಎಸ್ ಎಲ್ ನಲ್ಲಿನ ಆಕ್ಸಿಜನ್ ಪ್ಲಾಂಟ್ ಪರಿಶೀಲಿಸಿದ್ದೇವೆ. ಜಗದೀಶ್ ಶೆಟ್ಟರ್ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಈಗ ಒಂದು ದಿನಕ್ಕೆ 150 ಸಿಲಿಂಡರ್ ಸಿಗುತ್ತವೆ. ಹೆಚ್ಚಿನ ಆಕ್ಸಿಜನ್ ಉತ್ಪಾದಿಸಲು ಕಂಪ್ರಷರ್ ಅಗತ್ಯವಿದ್ದು, ಇದರಿಂದ 400 ಸಿಲಿಂಡರ್ ಆಕ್ಸಿಜನ್ ಉತ್ಪಾದಿಸಲು ಸಾಧ್ಯವಿದೆ ಎಂದರು.



