ದಾವಣಗೆರೆ: ಬೆಡ್ ಬ್ಲಾಕಿಂಗ್ ದಂಧೆಯನ್ನು ಪತ್ತೆ ಮಾಡಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹರಗುರವಾಗಿ ಮಾತನಾಡಿದ ಶಾಸಕ ಜಮೀರ್ ಅಹ್ಮದ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕಾಗುತ್ತದೆ ಎಂದು ಸಿಎಂ ರಾಜಕೀಯ ಕಾರರ್ಯದರ್ಶಿ ರೇಣುಕಾಚಾರ್ಯ ಎಚ್ಚರಿಕೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಂತಹ ಸಮಯದಲ್ಲಿ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ. ಇಂತಹ ಪ್ರಕರಣವನ್ನು ಸಂಸದರು ಪತ್ತೆಹಚ್ಚಿದ್ದಾರೆ. ಅವರು ಜಾತಿ,ಧರ್ಮ ನೋಡಿ ಹಗರಣ ಬಯಲಿಗೆ ಎಳೆದಿಲ್ಲ.
ನೀವು ಒಬ್ಬ ಶಾಸಕರಾಗಿ ಸಂಸದರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ನಿಮ್ಮ ಅನುಯಾಯಿಗಳು ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ದಾಳಿ ಮಾಡಿದವರನ್ನು ನೀವು ಹೋಗಿ ಸನ್ಮಾನ ಮಾಡಿದ್ದೀರಿ. ಅವರ ಬೆಂಬಲಕ್ಕೆ ನಿಲ್ಲುವ ಕೆಲಸ ಮಾಡಿದ್ದರೀರಿ. ನೀವು ಇದೇ ರೀತಿ ವರ್ತನೆ ತೋರಿದ್ರೆ ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕಾಗುತ್ತದೆ. ಮೊದಲು ನಿಮ್ಮ ಸಮುದಾಯದವರಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದರು.



