ಡಿವಿಜಿ ಸುದ್ದಿ, ದಾವಣಗೆರೆ : ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಅ. 28 ರಿಂದ ನ. 14 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ನಾಮಪತ್ರಗಳನ್ನು ಸಲ್ಲಿಸಲು ಅ.31 ಕೊನೆಯ ದಿನವಾಗಿರುತ್ತದೆ. ನ.02 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ನ.04 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ನ.12 ರಂದು ಬೆಳಿಗ್ಗೆ 07 ರಿಂದ 05 ಗಂಟೆಯವರೆಗೆ ಮತದಾನ ನಡೆಯಲಿದೆ.
ದಾವಣಗೆರೆ ತಾಲ್ಲೂಕಿನ ಅತ್ತಿಗೆರೆ ಗ್ರಾ.ಪಂ ವ್ಯಾಪ್ತಿಯ ರಾಮಗೊಂಡನಹಳ್ಳಿ-1,ಹರಿಹರ ತಾಲ್ಲೂಕಿನ ನಂದಿಗಾವಿ ಗ್ರಾ.ಪಂ ವ್ಯಾಪ್ತಿಯ ಧೂಳೆಹೊಳೆ ಕ್ಷೇತ್ರದಲ್ಲಿ 1, ಹರಳಹಳ್ಳಿ ಗ್ರಾ.ಪಂಯಲ್ಲಿ1, ಚನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾ.ಪಂ ವ್ಯಾಪ್ತಿಯ ರಾಮೇನಹಳ್ಳಿಯ 1 ಹಾಗೂ ಜಗಳೂರು ತಾಲ್ಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಾಪುರ ಕ್ಷೇತ್ರದ ಸಾಮಾನ್ಯ ಅಭ್ಯರ್ಥಿಯ 01 ಸ್ಥಾನಕ್ಕೆ ಚುನಾವಣೆ ನಡೆಯಲಿದೆ.



