ದಾವಣಗೆರೆ: ರಾಜ್ಯದ ಎಲ್ಲಾ ಶಾಸಕರ ಸಭೆ ಕರೆದು ಜನ ಸ್ನೇಹಿ ನೂತನ ಮರಳು ನೀತಿ ರೂಪಿಸುತ್ತೇನೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಹೇಳಿದರು.
ದಾವಣಗೆರೆ ಜಿಲ್ಲೆಯ ಹರಹರ ತಾಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಭೇಟಿ ವೇಳೆ ಮಾತನಾಡಿದ ಸಚಿವರು, ಭೂ ವಿಜ್ಞಾನ ಇಲಾಖೆಗೆ ಹೊಸ ಕಾಯಕಲ್ಪ ನೀಡಬೇಕಿದ್ದು, ಅಕ್ರಮ ಮರಳು ಗಣಿಗಾರಿಕೆ ತಡೆಯಬೇಕಿದೆ. ಈ ಬಗ್ಗೆ ರಾಜ್ಯದ ಎಲ್ಲ ಶಾಸಕರ ಸಭೆ ಕರೆದು ಸಮಗ್ರ ಮರಳು ನೀತಿ ರೂಪಿಸಲಾಗುವುದು. ಇದರೊಂದಿಗೆ ರಾಜ್ಯ ಸರ್ಕಾರಕ್ಕೆ ಆದಾಯದ ಜೊತೆಗೆ ಜನರಿಗೆ ಸಮರ್ಪಕವಾಗಿ ಮರಳು ಪೂರೈಸಲು ಅನುಕೂಲವಾಗಲಿದೆ ಎಂದರು.
ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಸಂಪೂರ್ಣವಾಗಿ ಅಧಿಕಾರಾವಧಿ ಮುಗಿಸಲಿದೆ. ಇನ್ನು ಪಕ್ಷದದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಣ್ಣ-ಪುಟ್ಟ ಸಮಸ್ಯೆಗಳನ್ನು ಮುಖ್ಯಮಂತ್ರಿ ಮತ್ತು ಪಕ್ಷದ ಹೈಕಮಾಂಡ್ ಬಗೆಹರಿಸಲಿದೆ. ಸರ್ಕಾರಕ್ಕೆ ಟೀಕ್ ಆಫ್ ಆಗಬಲು ಸಮಯಬೇಕಿದೆ ಎಂದದರು



