ಡಿವಿಜಿ ಸುದ್ದಿ, ದಾವಣಗೆರೆ: ತೀವ್ರ ಕೂತುಹಲ ಮೂಡಿಸಿರುವ ದಾವಣಗೆರೆ ಮಹಾನಗರ ಪಾಲಿಕೆ ಚುನಾವಣಾ ಕಣದಲ್ಲಿ ಅಂತಿಮವಾಗಿ 208 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಸೋಮವಾರ ನಾಮಪತ್ರ ವಾಪಸ್ಸು ತಗೆದುಕೊಳ್ಳಲು ಕೊನೆಯ ದಿನವಾಗಿತ್ತು.ಒಟ್ಟು 375 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಕೊನೆಯದಾಗಿ 208 ಅಭ್ಯರ್ಥಿಗಳು ಮಾತ್ರ ಕಣದಲ್ಲಿ ಉಳಿದು, ಇನ್ನುಳಿದ ಅಭ್ಯರ್ಥಿಗಳು ನಾಮಪತ್ರ ವಾಪಸ್ಸು ಪಡೆದಿದ್ದಾರೆ. ಬಿಜೆಪಿ 45, ಕಾಂಗ್ರೆಸ್ 44, ಜೆಡಿಎಸ್ 23 ಸಿಪಿಐ 5, ಬಿಎಸ್ ಪಿ 03, ಕೆಪಿಜೆಪಿ 02,ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ 1, ಕಮ್ಯೂನಿಸ್ಟ್ ಪಾರ್ಟಿ 01, ಪಕ್ಷೇತರರು 85 ಸೇರಿದಂತೆ ಒಟ್ಟು 208 ಅಭ್ಯರ್ಥಿಗಳು ಮಾತ್ರ ಕಣದಲ್ಲಿ ಉಳಿದಿದ್ಧಾರೆ.
ಕಾಂಗ್ರೆಸ್ ಪಕ್ಷದಿಂದ 45 ವಾರ್ಡ್ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿರುವ ಹಿನ್ನೆಲೆಯಲ್ಲಿ 45 ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಲ್ಲದಂತಾಗಿದೆ. ಈ ಮೂಲಕ 45 ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಪಕ್ಷ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡುವ ಸ್ಥಿತಿ ನಿರ್ಮಾಣವಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ನೇರ ಹಣಾಹಣಿಯಂತೆ ಕಂಡರೂ, ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿಗಳು ಮತ ವಿಭಜನೆ ಮಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ.
ರಂಗೇರಿದ ಚುನಾವಣಾ ಕಣ
ಕಣದಲ್ಲಿ 208 ಅಭ್ಯರ್ಥಿಗಳು ಮಾತ್ರ ಉಳಿದಿದ್ದರಿಂದ ಚುನಾವಣ ಕಣ ರಂಗು ಪಡೆದುಕೊಂಡಿದೆ. ಕಳೆದ ಎರಡು ದಿನದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ವಾಪಸ್ಸು ತಗೆಸುವಲ್ಲಿ ಬ್ಯುಸಿಯಾಗಿದ್ದರು. ಇದೀಗ ಅಂತಿಮ ಕಣದಲ್ಲಿ 208 ಅಭ್ಯರ್ಥಿಗಳು ಉಳಿಸಿದ್ದರಿಂದ ನಾಳೆಯಿಂದ ಚುನಾವಣೆ ಕಣ ಇನ್ನಷ್ಟು ರಂಗುಪಡೆಯಲಿದೆ.



